", "articleSection": "Politics,Viral", "image": { "@type": "ImageObject", "url": "https://prod.cdn.publicnext.com/s3fs-public/387839-1753017335-WhatsApp-Image-2025-07-20-at-6.42.47-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಂಬೈ: ಮಹಾರಾಷ್ಟ್ರದ ಕೃಷಿ ಸಚಿವ ಮಾಣಿಕ್ರಾವ್ ಕೊಕಟೆ ವಿಧಾನಸಭಾ ಅಧಿವೇಶನದ ವೇಳೆ ರಮ್ಮಿ ಆಟವಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ...Read more" } ", "keywords": "Maharashtra, Assembly session, Agriculture Minister, playing rummy, opposition criticism. ", "url": "https://dashboard.publicnext.com/node" }
ಮುಂಬೈ: ಮಹಾರಾಷ್ಟ್ರದ ಕೃಷಿ ಸಚಿವ ಮಾಣಿಕ್ರಾವ್ ಕೊಕಟೆ ವಿಧಾನಸಭಾ ಅಧಿವೇಶನದ ವೇಳೆ ರಮ್ಮಿ ಆಟವಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಟೀಕೆಗೆ ಗುರಿಯಾಗಿದ್ದಾರೆ.
ಈ ಘಟನೆಯ ಬೆನ್ನಲ್ಲೇ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್ ಅವರು ಈ ವಿಡಿಯೊವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದು, ಆಡಳಿತಾರೂಢ ‘ಮಹಾಯುತಿ’ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಕೃಷಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳಿವೆ. ರಾಜ್ಯದಲ್ಲಿ ಪ್ರತಿದಿನ ಎಂಟು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಯಾವುದೇ ಕೆಲಸವಿಲ್ಲದ ಕೃಷಿ ಸಚಿವ ಮಾಣಿಕ್‌ರಾವ್ ಕೊಕಾಟೆ ರಮ್ಮಿ ಆಡುವುದರಲ್ಲಿ ನಿರತರಾಗಿದ್ದಾರೆ’ ಎಂದು ರೋಹತ್ ಪವಾರ್ ಟೀಕಿಸಿದ್ದಾರೆ.
ಅಪೂರ್ಣ ವಿಡಿಯೋವನ್ನು ಬಳಸಿಕೊಂಡು ವಿರೋಧ ಪಕ್ಷಗಳು ತಮ್ಮ ವಿರುದ್ಧ ದೋಷಾರೋಪ ಮಾಡುತ್ತಿರುವುದಾಗಿ ಸಚಿವ ಕೊಕಟೆ ಬೇಸರ ವ್ಯಕ್ತಪಡಿಸಿದ್ದಾರೆ. "ಪೂರ್ಣ ವಿಡಿಯೋವನ್ನು ನೋಡಿದರೆ ನಿಜವಾದ ಸತ್ಯ ತಿಳಿಯುವುದು" ಎಂದು ಅವರು ಹೇಳಿದ್ದಾರೆ.
PublicNext
20/07/2025 06:45 pm