ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಅವರೇ ಸ್ಪಷ್ಟನೆ ನೀಡಿದ್ದಾರಲ್ಲ ಎಂದ ಡಿ.ಕೆ ಶಿವಕುಮಾರ್

#ಸದಾಶಿವನಗರ

ಬೆಂಗಳೂರು: ಮೈಸೂರು ಕಾರ್ಯಕ್ರಮದಲ್ಲಿ ಸಿಎಂ ನಿಮಗೆ ಅಪಮಾನ ಮಾಡಿದರು ಎನ್ನುವ ವರದಿಗಳ ಬಗ್ಗೆ ಕೇಳಿದಾಗ, ಈಗಾಗಲೇ ಇದರ ಬಗ್ಗೆ ಶನಿವಾರ ಹಾಗೂ ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿಗಳೇ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ನನ್ನ ಕೆಲಸ ನಾನು‌ ಮಾಡುತ್ತಿದ್ದೇನೆ ಎಂದು ಇಂದು ಸದಾಶಿವನಗರದಲ್ಲಿ ಡಿಸಿಎಂ ಡಿಕೆಶಿವಕುಮಾರ್ ತಿಳಿಸಿದರು.

ಎರಡು ದಿನ ಕನಕಪುರದಲ್ಲಿ ಜನಸ್ಪಂದನ ಮಾಡುತ್ತಿರುವ ಬಗ್ಗೆ ಕೇಳಿದಾಗ,‌ ಕ್ಷೇತ್ರದ ಜನರಿಗೆ ನಾನು ಸಮಯ ನೀಡಲು ಆಗುತ್ತಿಲ್ಲ. ಅದಕ್ಕೆ ಎರಡು ದಿನ ಅಲ್ಲಿಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತೇನೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟುಹಬ್ಬದ ಬಗ್ಗೆ ಕೇಳಿದಾಗ, "ಅವರು ಬರೀ ಖರ್ಗೆಯವರಲ್ಲ, ಎಐಸಿಸಿ ಅಧ್ಯಕ್ಷರು. ಅವರ ಜನ್ಮದಿನಕ್ಕೆ ಕೆಪಿಸಿಸಿ ವತಿಯಿಂದ ಅವರಿಗೆ ತುಂಬು ಹೃದಯದ ಶುಭಾಶಯಗಳನ್ನು ತಿಳಿಸುತ್ತೇವೆ ಎಂದರು.

Edited By : Nagaraj Tulugeri
PublicNext

PublicNext

20/07/2025 10:49 pm

Cinque Terre

10.91 K

Cinque Terre

0