ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಸಣ್ಣ, ಅತಿ ಸಣ್ಣ ವ್ಯಾಪಾರಿಗಳಿಗೆ ಕಿರುಕುಳ ಕೊಡ್ತಿದ್ದಾರೆ, ಸಿಎಂ ಮಧ್ಯಪ್ರವೇಶಕ್ಕೆ ಬೊಮ್ಮಾಯಿ ಆಗ್ರಹ

ಬೆಂಗಳೂರು : ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆಯವರು ನೊಟಿಸ್ ಕೊಟ್ಟಿದ್ದು ಸಣ್ಣ ವ್ಯಾಪಾರಸ್ಥರಿಗೆ ದೊಡ್ಡ ಆಘಾತವಾಗಿದೆ. ಈಗ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೇಲೆ ಹಾಕಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಕೂಡಲೇ ಸಿಎಂ ಮಧ್ಯಪ್ರವೇಶಿಸಬೇಕು ಎಂದು ಸಂಸದ ಬೊಮ್ಮಾಯಿ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು,ಜಿಎಸ್ ಟಿ ಕೌನ್ಸಿಲ್ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ಜವಾಬ್ದಾರಿ ಇದೆ. ರಾಜ್ಯದ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಹೊಣೆ ಮತ್ತು ನಿರ್ವಹಣೆಯನ್ನು ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯವರು ನೋಡುತ್ತಾರೆ. ಈಗ ಸಣ್ಣ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿರುವುದರಿಂದ ಅವರ ವ್ಯಾಪಾರ್ ಬಂದ ಆಗಿರುವುದು ದೊಡ್ಡ ಹೊಡೆತ ಬಿದ್ದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಣ್ಣ ವ್ಯಾಪಾರಸ್ಥ ಮುಖಂಡರನ್ನು ಕರೆದು ಮಾತನಾಡಬೇಕು. ಸಿಎಂ ಹಣಕಾಸು ಸಚಿವರಾಗಿದ್ದು ಅವರು ಇದನ್ನು ಬಗೆ ಹರಿಸಬೇಕು. ಹಾಗೂ ಮುಂದಿನ ದಿನಗಳಲ್ಲಿ ವ್ಯಾಪಾರಸ್ಥರು ಕಾನೂನು ಬದ್ದವಾಗಿ ತೆರಿಗೆ ಕಟ್ಟಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಗೆ ಎಲ್ಲ ಗೊತ್ತಿದ್ದು ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳೇ ನೊಟೀಸ್ ಕೊಟ್ಟಿದ್ದಾರೆ. ಇಲ್ಲಿ ಯಾರೂ ಯಾರ ಬಾಯಿಗೆ ವರೆಸುವ ಪ್ರಶ್ನೆ ಇಲ್ಲ. ಅವರು ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

Edited By : Shivu K
PublicNext

PublicNext

21/07/2025 06:05 pm

Cinque Terre

48.2 K

Cinque Terre

0

ಸಂಬಂಧಿತ ಸುದ್ದಿ