ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ವಿಐಪಿ ಸಂಚಾರ ವೇಳೆ ಸೈರನ್ ಬಳಕೆ ನಿಷೇಧ - ಪೊಲೀಸ್ ಮಹಾನಿರ್ದೇಶಕ ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕದಲ್ಲಿ ವಿವಿಐಪಿ ಸಂಚಾರ ವೇಳೆ ಸೈರನ್ ಬಳಕೆಗೆ ಬ್ರೇಕ್ ಹಾಕಲಾಗಿದೆ. ಗಣ್ಯರ ಕಾರುಗಳ ಮುಂಗಾವಲು ಹಾಗೂ ಬೆಂಗಾವಲು ವಾಹನಗಳಿಗೆ ಸೈರನ್ ಬಳಸದಂತೆ ಕರ್ನಾಟಕ ಪೊಲೀಸ್ ನಿರ್ದೇಶಕ ಆದೇಶ ಹೊರಡಿಸಿದ್ದಾರೆ. ಸೈರನ್ ಬಳಕೆಯಿಂದ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ ಎನ್ನುವ ಕಾರಣಕ್ಕೆ ಈ ಕ್ರಮಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ತೊಂದರೆಯಾಗುತ್ತದೆ. ಸೈರನ್ ಬಳಕೆಯಿಂದ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಅಪಘಾತ ಉಂಟಾಗುವ ಸಾಧ್ಯತೆ ಇರುತ್ತದೆ. ವಿಐಪಿ ಸಂಚಾರದ ವೇಳೆ, ತುರ್ತು ಚಲನವಲನದ ಅವಶ್ಯಕತೆಗಳಿಗೆ ವೈರ್‌ಲೆಸ್ ಕಮ್ಯುನಿಕೇಶನ್ ಮುಖಾಂತರ ಮಾಹಿತಿ ವಿನಿಮಯ ಮಾಡಬೇಕು. ಸೈರನ್‌ಗಳನ್ನು ಕೇವಲ ಅಂಬ್ಯುಲೆನ್ಸ್, ಪೊಲೀಸ್ , ಅಗ್ನಿಶಾಮಕ ವಾಹನಗಳು ತುರ್ತು ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕೆಂದು ಡಿಜಿ, ಐಜಿಪಿ ಎಂ.ಎ.ಸಲೀಂ ಆದೇಶದಲ್ಲಿ ಸೂಚಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ತುರ್ತು ಸೇವೆಯ ವಾಹನಗಳನ್ನು ಬಿಟ್ಟು ಇನ್ಯಾರೂ ಸೈರನ್ ಬಳಸುವಂತಿಲ್ಲ. ಹಾಗೆಯೇ ಪೊಲಿಸ್ ಸೈರನ್ ಬಳಸುವಂತಿಲ್ಲ. ತುರ್ತು ಸಂದರ್ಭಗಳಲ್ಲಿ ಮಾತ್ರ, ಪೊಲೀಸ್ ಅಂಬ್ಯುಲೆನ್ಸ್, ಅಗ್ನಿ ಶಾಮದಳ ವಾಹನಗಳು ಮಾತ್ರ ಈ ಸೈರನ್ ಬಳಕೆ ಮಾಡಬಹುದಾಗಿದೆ. ಇನ್ನು ನಿಯಮ ಉಲ್ಲಂಘಿಸಿದರೆ ಮೋಟರ್ ವಾಹನ ಕಾ್ಯದೆ 190(2( ಪ್ರಕಾರ ದಂಡ ಜತೆಗೆ ಮೂರು ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಬಹುದು.

Edited By :
PublicNext

PublicNext

21/07/2025 08:32 pm

Cinque Terre

13.39 K

Cinque Terre

4