ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO : 83ನೇ ವಸಂತಕ್ಕೆ ಕಾಲಿಟ್ಟ ಮಲ್ಲಿಕಾರ್ಜುನ ಖರ್ಗೆ - ಕೇಕ್ ತಿನ್ನಿಸಿ ಸಂಭ್ರಮಿಸಿದ ರಾಹುಲ್‌ ಗಾಂಧಿ

ನವದೆಹಲಿ : 83ನೇ ವರ್ಷಕ್ಕೆ ಕಾಲಿಟ್ಟಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಸಂಸದರಾದ ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕರು ಶುಭಾಶಯ ಕೋರಿದ್ದಾರೆ.

ಕಾಂಗ್ರೆಸ್‌ ಸಂಸದರು ಕೇಕ್ ಕತ್ತರಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನವನ್ನು ಆಚರಿಸಿದ್ದು, ರಾಹುಲ್‌ ಗಾಂಧಿ ಅವರು ಹಿರಿಯ ನಾಯಕನಿಗೆ ಕೇಕ್‌ ತಿನ್ನಿಸುವ ಮೂಲಕ ಜನ್ಮದಿನದ ಶುಭಾಶಯ ಕೋರಿದರು.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Edited By : Abhishek Kamoji
PublicNext

PublicNext

21/07/2025 10:47 pm

Cinque Terre

11.25 K

Cinque Terre

0

ಸಂಬಂಧಿತ ಸುದ್ದಿ