", "articleSection": "Politics,Crime,Law and Order,Government", "image": { "@type": "ImageObject", "url": "https://prod.cdn.publicnext.com/s3fs-public/229640-1753174295-param.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಧರ್ಮಸ್ಥಳ ಪ್ರಕರಣದ ಬಗ್ಗೆ ಈಗಾಗಲೇ ಎಸ್ಐಟಿ ರಚನೆಯಾಗಿದೆ,ಎಸ್ಐಟಿ ತಂಡಕ್ಕೆ ಸೂಚನೆ ಕೊಡಲಾಗಿದೆ ಕೂಡಲೇ ಧರ್ಮಸ್ಥಳಕ್ಕೆ ಹೋಗಿ ತನಿಖಾ...Read more" } ", "keywords": "Dharmasthala SIT probe, investigation begins, Minister Parameshwar, Karnataka SIT team, Dharmasthala case update.", "url": "https://dashboard.publicnext.com/node" }
ಬೆಂಗಳೂರು : ಧರ್ಮಸ್ಥಳ ಪ್ರಕರಣದ ಬಗ್ಗೆ ಈಗಾಗಲೇ ಎಸ್ಐಟಿ ರಚನೆಯಾಗಿದೆ,ಎಸ್ಐಟಿ ತಂಡಕ್ಕೆ ಸೂಚನೆ ಕೊಡಲಾಗಿದೆ ಕೂಡಲೇ ಧರ್ಮಸ್ಥಳಕ್ಕೆ ಹೋಗಿ ತನಿಖಾ ಪ್ರಕ್ರಿಯೆ ಶುರು ಮಾಡಲು ತಿಳಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, SIT ತಂಡ ಸದ್ಯದಲ್ಲೇ ಧರ್ಮಸ್ಥಳಕ್ಕೆ ಹೋಗಲಿದೆ, ಇದನ್ನ ಧರ್ಮಸ್ಥಳದ ಪೊಲೀಸರಿಗೂ ಈ ಸಂಬಂಧ ಸೂಚನೆ ಕೊಡಲಾಗಿದೆ.
ಎಸ್ಐಟಿ ತಂಡದಿಂದ ಯಾರೂ ಹೊರಗುಳಿಯಲ್ಲ, ಯಾರಾದ್ರೂ ಹೊರಗೆ ಉಳಿಯುವುದಾದರೆ ನಮಗೆ ತಿಳಿಸಲಿ, ಆ ಬಗ್ಗೆ ಕ್ರಮ ತಗೋತೀವಿ, ಇನ್ನೂವರೆಗೆ ಯಾರೂ ನಮ್ಮನ್ನು ಈ ವಿಚಾರದಲ್ಲಿ ಏನೂ ಮಾಹಿತಿ ಕೊಟ್ಟಿಲ್ಲ ಎಂದರು.
ಇನ್ನು ಎಸ್‌ಐಟಿ ರಚನೆ ಬಗ್ಗೆ ಬಿಜೆಪಿಯವರಿಂದ ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಗ್ಗೆ ಮಾತನಾಡಿದ ಅವರು, ಈಗಿಂದಲೇ ಯಾಕೆ ಅವರು ಏನೇನೋ ಫ್ರೇಮ್ ಮಾಡ್ತಿದ್ದಾರೆ..? ಎಸ್ಐಟಿ ರಚನೆಯಲ್ಲಿ ರಾಜಕೀಯ ಉದ್ದೇಶ ಇದೆ ಅಂತ ಈಗಲೇ ಹೇಗೆ ಹೇಳ್ತಾರೆ, ಅವ್ರು ಅಂದಮೇಲೆ ಅವರ ಮನಸಲ್ಲಿ ಏನೋ ಇದೆ ಅಂತ ಆಯ್ತಲ್ಲ ಎಂದು ಬಿಜೆಪಿಯವರ ಆಕ್ಷೇಪಕ್ಕೆ ಪರಮೇಶ್ವರ್ ಟಕ್ಕರ್ ಕೊಟ್ಟರು.
PublicNext
22/07/2025 02:27 pm