", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/454739-1753182001-Untitled-design-(26).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShankarSirisi" }, "editor": { "@type": "Person", "name": "mudakanagouda.p" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿರಸಿ: ದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ, ಸನ್ಮಾನಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ. ಈ...Read more" } ", "keywords": "Shivraj Singh Chouhan Kolar visit, Union Agriculture Minister Kolar, Shivraj Singh Chouhan Karnataka visit, Kolar agriculture meeting, Shivraj Singh Chouhan farmer meeting Kolar. ", "url": "https://dashboard.publicnext.com/node" } ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ಮಾಡಿದ ಕಾಗೇರಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ಮಾಡಿದ ಕಾಗೇರಿ

ಶಿರಸಿ: ದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ, ಸನ್ಮಾನಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ. ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಬಾರದೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದರು.

ಅಂತಹ ಸಮಯದಲ್ಲಿ‌ ಅಡಿಕೆ ಬೆಳೆಗಾರರಿಗೆ ಬೆಳೆ ವಿಮೆ ಒದಗಿಸಿಕೊಟ್ಟಿರುವ ಹಿನ್ನೆಲೆಯಲ್ಲಿ ಸಮಸ್ತ ಅಡಿಕೆ ಬೆಳೆಗಾರರ ಪರವಾಗಿ ಸಂಸದ ಕಾಗೇರಿಯವರು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

ನಂತರ ಇದೇ ಸಂದರ್ಭದಲ್ಲಿ, ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಕೂಲಂಕುಷವಾಗಿ ಚರ್ಚಿಸಲು ಮತ್ತು ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಲು ಕರ್ನಾಟಕ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶಗಳ ಸಂಸದರು ಮತ್ತು ಅಡಿಕೆ ಬೆಳೆಗಾರರ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ಒಂದು ಮಹತ್ವದ ಸಭೆಯನ್ನು ಆಯೋಜಿಸುವಂತೆ ಸಚಿವರಲ್ಲಿ ವಿನಂತಿ ಮಾಡಿದ್ದಾರೆ. ಹಾಗೆಯೇ, ಕರ್ನಾಟಕ ಸರ್ಕಾರದ ಮಳೆ ಮಾಪನ ಯಂತ್ರಗಳ ನಿರ್ವಹಣೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮಳೆ ಮಾಪನ ಯಂತ್ರಗಳ ಸಮರ್ಪಕ ಕಾರ್ಯನಿರ್ವಹಣೆ ಹವಾಮಾನ ಆಧಾರಿತ ಬೆಳೆ ವಿಮೆಯಂತಹ ಯೋಜನೆಗಳ ಯಶಸ್ಸಿಗೆ ಅತ್ಯಗತ್ಯವಾಗಿದೆ.

Edited By :
PublicNext

PublicNext

22/07/2025 04:30 pm

Cinque Terre

7.52 K

Cinque Terre

0

ಸಂಬಂಧಿತ ಸುದ್ದಿ