ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆ ವಿರುದ್ದ ಸಿಡಿದೆದ್ದ ಸಣ್ಣ ಉದ್ದಿಮೆದಾರರು ಇದೇ ತಿಂಗಳ 24ರಂದು ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ವಿರುದ್ಧ ಇವತ್ತು ಕರ್ನಾಟಕ ರಾಜ್ಯ ಬೇಕರಿ ಕಾಂಡಿಮೆಂಟ್ಸ್ ಮತ್ತು ಸಣ್ಣ ಉದ್ದಿಮೆದಾರರ ಒಕ್ಕೂಟದಿಂದ ಸುದ್ದಿಗೋಷ್ಠಿ ನಡೆಸಿದ್ದು ಪ್ರೆಸ್ ಕ್ಲಬ್‌ನಲ್ಲಿ ಪ್ರೆಸ್ ಮೀಟ್ ನಡೆದಿದೆ.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಕರುಣಾಕರ ಶೆಟ್ಟಿ ಹಟ್ಟಿಯಂಗಡಿ, ಕೇಶವ ಪೂಜಾರಿ, ಭೋಜರಾಜ್ ಶೆಟ್ಟಿ, ಕಾರ್ಯದರ್ಶಿ ವಸಂತಶೆಟ್ಟಿ, ಖಜಾಂಚಿ ವೆಂಕಟೇಶ್ ಪೈ, ಬೆಂಗಳೂರು ನಗರ ಅಧ್ಯಕ್ಷ ಸಂತೋಷ್ ಶೆಟ್ಟಿ ಉಪಸ್ಥಿತಿ ಇದ್ದರು. ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಪ್ರಯತ್ನ ಅಂತ ಆಕ್ರೋಶ ವ್ಯಕ್ತಪಡಿಸಿದರು.
PublicNext
22/07/2025 09:21 pm