ಬೆಂಗಳೂರು : ಇತ್ತಿಚೆಗೆ ನಿಧನರಾದ ಹಿರಿಯ ಕಲಾವಿದೆ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ನಟಿ ತಾರಾ ಅನುರಾಧ ಮನವಿ ಮಾಡಿದ್ದಾರೆ. ಸಿಎಂ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯನವರನ್ನ ಭೇಟಿಯಾದ ನಟಿ ತಾರಾ ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಿ ಎಂದು ಮನವಿ ಮಾಡಿದರು. ತಾರಾ ಅವರ ಮನವಿಗೆ ಸಿಎಂ ಸಿದ್ದರಾಮಯ್ಯ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
PublicNext
23/07/2025 01:50 pm