ಬೆಂಗಳೂರು: ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೋಟಿಸ್ ವಿಷಯಕ್ಕೆ ಸಂಬಂಧಿಸಿದಂತೆ ಜುಲೈ 25 ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ವಾಪಸ್ ಪಡೆದಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೋಟಿಸ್ ವಿಷಯಕ್ಕೆ ಸಂಬಂಧಿಸಿದಂತೆ ವ್ಯಾಪಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ವ್ಯಾಪಾರಿಗಳ ಅಹವಾಲು ಸ್ವೀಕರಿಸಿದ ಬಳಿಕ ಸಿಎಂ ಮಾತನಾಡಿ, ನೋಟಿಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್‌ಟಿ ನೋಂದಣಿ ಮಾಡಬೇಕು ಎಂದು ತಿಳಿಸಿದ್ದಾರೆ.
ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18 ಸಾವಿರ ನೋಟಿಸ್ ಜಾರಿಗೊಳಿಸಲಾಗಿದೆ. ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ ಎಂದು ತಿಳಿಸಿದರು.
ಸಿಎಂ ಮನವಿ ಮೇರಿಗೆ ಸಿಎಂ ಭರವಸೆಗೆ ಒಪ್ಪಿ ವ್ಯಾಪಾರ ವಹಿವಾಟು ಬಂದ್ಗೆ ಕರೆ ನೀಡಿದ್ದನ್ನು ವಾಪಸ್ ಪಡೆಯೋದಾಗಿ ಸಭೆಯಲ್ಲಿ ಭಾಗಿಯಾಗಿದ್ದ ವ್ಯಾಪಾರಸ್ಥರ ನಿಯೋಗ ಸಿಎಂಗೆ ತಿಳಿಸಿದೆ.
PublicNext
23/07/2025 06:42 pm