ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊರರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧ - ಈಶ್ವರ ಖಂಡ್ರೆ ಸ್ಪಷ್ಟನೆ

ಬೆಂಗಳೂರು : ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಈ ಕುರಿತು

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಅಡಿಯಲ್ಲಿ ಮೀಸಲು ಅರಣ್ಯ, ವನ್ಯಜೀವಿಧಾಮ, ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಜನರ ಅತಿಕ್ರಮ ಪ್ರವೇಶಕ್ಕೆ ಮತ್ತು ಸಾಕುಪ್ರಾಣಿಗಳನ್ನು ಮೇಯಿಸಲು ಅವಕಾಶ ಇರುವುದಿಲ್ಲ. ಆದರೆ ರಾಜ್ಯದ ಕೆಲವು ಅರಣ್ಯ ಭಾಗದಲ್ಲಿ ಹಲವು ವರ್ಷದಿಂದ ಇಂತಹ ರೂಢಿ ಇದ್ದು, ಕಾಡಿನಂಚಿನ ಜನರಿಗೆ ಜಾಗೃತಿ ಮೂಡಿಸಿ, ಅವರಿಗೆ ಹೆಚ್ಚು ಹಾಲು ನೀಡುವ ಹಸುಗಳನ್ನು ಹೊಂದಲು ಅವಕಾಶ ಕಲ್ಪಿಸುವ ಮೂಲಕ ಮತ್ತು ತಮ್ಮ ಪಟ್ಟಾ ಜಮೀನಿನಲ್ಲಿ ಹಸಿ ಮೇವು ಬೆಳೆಸಲು ಪ್ರೋತ್ಸಾಹಿಸುವ ಮೂಲಕ ಹಂತ ಹಂತವಾಗಿ ಅರಣ್ಯದಲ್ಲಿ ಜಾನುವಾರುಗಳನ್ನು ಬಿಡದಂತೆ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ ಅಂಕಿ ಅಂಶ ತಿಳಿಸುತ್ತದೆ. ಇಷ್ಟೊಂದು ದನಕರುಗಳನ್ನು ಒಟ್ಟಿಗೆ ಕಾಡಿಗೆ ತೆಗೆದುಕೊಂಡು ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ, ನೀರಿನ ಕೊರತೆ ಎದುರಾಗುತ್ತಿದೆ. ಕಾಲುಬಾಯಿ ರೋಗ, ಚರ್ಮಗಂಟು ಅಥವಾ ಬಾವು (ಲಿಂಪಿ ಸ್ಕಿನ್), ನೆರಡಿ (ಆಂಥರಾಕ್ಸ್) ಮೊದಲಾದ ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇರುತ್ತದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಜಾನುವಾರುಗಳನ್ನು ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ. ಆದರೆ ಸ್ಥಳೀಯರ ದನಕರುಗಳಿಗೆ ಮತ್ತು ಅರಣ್ಯಹಕ್ಕು ಕಾಯಿದೆಯಡಿ ಹಕ್ಕು ಪಡೆದವರಿಗೆ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

24/07/2025 05:30 pm

Cinque Terre

30.55 K

Cinque Terre

0

ಸಂಬಂಧಿತ ಸುದ್ದಿ