ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಮಾರ್ಟ್ ಮೀಟರ್ ಹಗರಣ : ಕೆ.ಜೆ.ಜಾರ್ಜ್ ವಜಾ ಮಾಡಿ ಎಂದು ಅಶ್ವತ್ಥನಾರಾಯಣ್ ಆಗ್ರಹ

ಬೆಂಗಳೂರು : ಸ್ಮಾರ್ಟ್ ಮೀಟರ್ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ವಜಾಗೊಳಿಸಬೇಕು; ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಕಿರೀಟಕ್ಕೆ ಈ ಭ್ರಷ್ಟಾಚಾರ ಹಗರಣವು ಮತ್ತೊಂದು ಹೊಸ ಗರಿ ಎಂದರು. ಈ ವಿಚಾರದಲ್ಲಿ ಮುಖ್ಯಮಂತ್ರಿಗಳ ಉತ್ತರವೇನು ಎಂದು ಪ್ರಶ್ನಿಸಿದರು. 15 ಸಾವಿರ ಕೋಟಿ ಎಂದರೆ ಸಣ್ಣ ಮೊತ್ತವಲ್ಲ. ಹಾಗಾಗಿ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು. ಅರ್ಹತೆ ಇಲ್ಲದ ಗುತ್ತಿಗೆದಾರನಿಗೆ ಗುತ್ತಿಗೆ, ಬ್ಲ್ಯಾಕ್ ಲಿಸ್ಟೆಡ್ ಕಂಪೆನಿ ಜೊತೆ ಒಡಂಬಡಿಕೆ, ನಿಯಮಾವಳಿ ಉಲ್ಲಂಘನೆ ಮಾಡಿದ್ದನ್ನು ಹಾಗೂ ರಾಷ್ಟ್ರದಲ್ಲೇ ಗರಿಷ್ಠ- ದುಬಾರಿ ದರ ವಿಧಿಸುತ್ತಿರುವುದು, ಕಡ್ಡಾಯ ಇಲ್ಲದಿದ್ದರೂ ಕಡ್ಡಾಯ ಮಾಡಿದ್ದಾರೆ.

ಏಪ್ರಿಲ್‍ನಲ್ಲೇ ಲೋಕಾಯುಕ್ತ ಪೊಲೀಸ್‍ಗೆ ದೂರು ಕೊಟ್ಟಿದ್ದೇವೆ. ನಂತರ ಮರು ಮನವಿ ನೀಡಿದ್ದೇವೆ. ತಡವಾದ ಕಾರಣ ಚುನಾಯಿತ ಪ್ರತಿನಿಧಿಗಳ ಕ್ರಿಮಿನಲ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದೇವೆ. ಶಾಸಕರಾದ ನಾನು, ಎಸ್.ಆರ್.ವಿಶ್ವನಾಥ್, ಧೀರಜ್ ಮುನಿರಾಜು ಅವರು ಕೋರ್ಟಿನ ಬಾಗಿಲು ತಟ್ಟಿದ್ದೇವೆ, ರಾಜ್ಯಪಾಲರಿಗೂ ಅರ್ಜಿ ಕೊಟ್ಟೆವು. ಮರು ಮನವಿ ಬಗ್ಗೆ ಸಲಹೆ ಬಂತು. ಅದರಂತೆ ಕೇಸು ದಾಖಲಿಸಿದೆವು. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆಗೆ ಅನುಮತಿ ಕೇಳಿದ್ದೇವೆ ಎಂದರು. ಈ ಕುರಿತು ಸದನದಲ್ಲೂ ಹೋರಾಟ

ನಡೆಸೊದಾಗಿ ತಿಳಿಸಿದರು.

Edited By : Nagaraj Tulugeri
PublicNext

PublicNext

24/07/2025 09:50 pm

Cinque Terre

38.16 K

Cinque Terre

0

ಸಂಬಂಧಿತ ಸುದ್ದಿ