", "articleSection": "Crime,Law and Order,Cinema", "image": { "@type": "ImageObject", "url": "https://prod.cdn.publicnext.com/s3fs-public/387839-1753409305-Untitled-design---2025-07-25T074058.151.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ : ನಟ ದರ್ಶನ್ ಸೇರಿದಂತೆ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶದ ಕುರಿತು ಸುಪ್ರೀಂ ಕೋರ್ಟ್ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ...Read more" } ", "keywords": "Supreme Court, High Court, bail order, criticism, judicial discretion, Darshan case, Renukaswamy murder, Karnataka government, appeal, judicial scrutiny. ", "url": "https://dashboard.publicnext.com/node" }
ನವದೆಹಲಿ : ನಟ ದರ್ಶನ್ ಸೇರಿದಂತೆ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶದ ಕುರಿತು ಸುಪ್ರೀಂ ಕೋರ್ಟ್ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. "ಸಾಕ್ಷ್ಯಾಧಾರಗಳ ಪರಿಶೀಲನೆಗಿಂತ ಮುಂಚೆ ವಿಮರ್ಶೆಯಿಲ್ಲದೆ ಜಾಮೀನು ನೀಡಿರುವ ಹೈಕೋರ್ಟ್ ತೀರ್ಪು ಸಮಂಜಸವಲ್ಲ ಎಂದು ನ್ಯಾಯಮೂರ್ತಿ ಪರ್ದೀವಾಲಾ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.
ಸಾಕ್ಷ್ಯಾಧಾರಗಳ ಲಭ್ಯತೆ ಇದ್ದರೂ ಗಂಭೀರವಾಗಿ ಪರಿಗಣಿಸದೇ ಜಾಮೀನು ನೀಡಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ, ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪಿನ ವಿರುದ್ಧ ಕಿಡಿಕಾರಿದೆ.
1.40 ಗಂಟೆಯ ವಿಚಾರಣೆಯಲ್ಲಿ ಏನು ನಡೆಯಿತು..?
ಸುಪ್ರೀಂ ಕೋರ್ಟ್‌ನಲ್ಲಿ 1 ಗಂಟೆ 40 ನಿಮಿಷಗಳ ಕಾಲ ನಡೆದ ವಿಚಾರಣೆಯಲ್ಲಿ, ಪೀಠವು ಪ್ರಕರಣದ ಸಾಕ್ಷ್ಯಾಧಾರಗಳು, ಎಫ್‌ಎಸ್‌ಎಲ್ ವರದಿ, ಸ್ಥಳ ಪರಿಶೀಲನೆ ವರದಿಗಳು ಎಲ್ಲವೂ ಸ್ಪಷ್ಟವಾಗಿರುವಾಗ, ಹೈಕೋರ್ಟ್ ಯಾಕೆ ಜಾಮೀನು ನೀಡಿತು ಎಂಬ ಪ್ರಶ್ನೆ ಎತ್ತಿದೆ. ಪ್ರಮುಖ ಕರೆ ವಿವರಗಳು, ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಹಾಗೂ ಇತರ ಸಾಕ್ಷ್ಯಾಧಾರಗಳ ಕುರಿತು ಪೀಠ ಸ್ಪಷ್ಟತೆ ಕೇಳಿದೆ.
ಅದಷ್ಟೇ ಅಲ್ಲ, ದರ್ಶನ್ (ಎ1) ಮತ್ತು ಪವಿತ್ರಾ ಗೌಡ (ಎ2) ನಡುವಿನ ಸಂಪರ್ಕದ ವಿಚಾರದಲ್ಲೂ ಸುಪ್ರೀಂ ಕೋರ್ಟ್ ಪ್ರಶ್ನೆ ಎತ್ತಿದ್ದು, ಅವರ ಕರೆ ಸಂವಹನದ ವಿವರಗಳನ್ನು ಪರಿಶೀಲಿಸಲು ತನಿಖಾ ವರದಿಗಳನ್ನು ಮತ್ತೆ ಪರಿಶೀಲಿಸುವಂತೆ ಸೂಚಿಸಿದೆ.
ಜಾಮೀನು ತೀರ್ಪಿಗೆ ಸುಪ್ರೀಂ ಅಸಮಾಧಾನ
ಪೂರ್ಣ ವಾದ ಆಲಿಸಿದ ನಂತರ, ನ್ಯಾಯಮೂರ್ತಿ ಪರ್ದೀವಾಲಾ ಅವರ ನೇತೃತ್ವದ ಪೀಠ, "ಹೈಕೋರ್ಟ್ ಏಳು ಆರೋಪಿಗಳನ್ನು ನಿರ್ದೋಷಿ ಎಂದು ಭಾವಿಸಿತೇ? ಇಂತಹ ತೀರ್ಪುಗಳು ಎಲ್ಲ ಜಾಮೀನು ಪ್ರಕರಣಗಳಲ್ಲೂ ಆಗುತ್ತವೆಯೇ? ನ್ಯಾಯಮೂರ್ತಿಗಳಿಂದ ಇಂತಹ ತಪ್ಪು ತೀರ್ಪು ಸಾಧ್ಯವೇ? ಎಂಬಂತಹ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಗ್ಯಾಂಗ್‌ಗೆ ನೀಡಲಾದ ಜಾಮೀನು ರದ್ದಾಗಬಹುದೆಂಬ ಸಾಧ್ಯತೆ ಬಲವಾಗಿ ಕೇಳಿಬರುತ್ತಿದೆ. ಅಂತಿಮ ತೀರ್ಪು ಮುಂದಿನ ವಾರ ಹೊರ ಬೀಳಲಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 17 ಆರೋಪಿಗಳನ್ನು ಪೊಲೀಸರು ಬಂಧಿಸಿ, ಚಾರ್ಜ್‌ಶೀಟ್ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಎಲ್ಲ ಆರೋಪಿಗಳಿಗೆ ಜಾಮೀನು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
ಈ ನಡುವೆ, ದರ್ಶನ್ ವಿದೇಶಕ್ಕೆ ಹೋಗಿದ್ದು ಸಿನಿಮಾ ಶೂಟಿಂಗ್ ನಡೆಸುತ್ತಿದ್ದಾರೆ. ಜುಲೈ 17ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಹೈಕೋರ್ಟ್ ನೀಡಿದ್ದ ಜಾಮೀನಿನ ಆಧಾರಗಳನ್ನು ಸಮಂಜಸವಿಲ್ಲವೆಂದು ಅಭಿಪ್ರಾಯಪಟ್ಟಿತ್ತು. ವಿಚಾರಣೆಯನ್ನು ಜು.22ಕ್ಕೆ ಮುಂದೂಡಲಾಗಿತ್ತು.
ಈ ವಿಚಾರಣೆಯ ನಂತರ, ದರ್ಶನ್ ಸೇರಿದಂತೆ ಜಾಮೀನು ಪಡೆದ ಎಲ್ಲ 7 ಆರೋಪಿಗಳ ಭವಿಷ್ಯ ಪ್ರಶ್ನಾರ್ಥವಾಗಿದೆ. ಸುಪ್ರೀಂ ಕೋರ್ಟ್ ಒಂದು ವಾರದ ಅವಕಾಶ ನೀಡಿ ಅಂತಿಮ ತೀರ್ಪು ಕಾಯ್ದಿರಿಸಿದೆ.
PublicNext
25/07/2025 07:38 am