", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/474798-1753421720-jati.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "Vinay.Hegde" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮತ್ತೆ ಮತ್ತೆ ಆತುರಾತುರವಾಗಿ ಜಾತಿ ಸಮೀಕ್ಷೆ ಮಾಡ್ತೀವಿ ಅಂತಿರೋದು ನೋಡಿದ್ರೆ ಸಿಎಂ ಸ್ಥಾನದಿಂದ ಇಳಿಯುವ ಸಂದೇಶ...Read more" } ", "keywords": "caste census, Karnataka, R Ashoka, CM change, BJP Karnataka, caste survey, Bengaluru news, Karnataka politics.", "url": "https://dashboard.publicnext.com/node" }
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮತ್ತೆ ಮತ್ತೆ ಆತುರಾತುರವಾಗಿ ಜಾತಿ ಸಮೀಕ್ಷೆ ಮಾಡ್ತೀವಿ ಅಂತಿರೋದು ನೋಡಿದ್ರೆ ಸಿಎಂ ಸ್ಥಾನದಿಂದ ಇಳಿಯುವ ಸಂದೇಶ ನಾ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಈ ಹಿಂದಿನ ಜಾತಿ ಗಣತಿ ಬಿಡುಗಡೆಗೆ ಹತ್ತು ವರ್ಷವಾಗಿದೆ. ಆದರೆ ಈಗ ಮಾಡಿದ ಒಳಮೀಸಲು ಸಮೀಕ್ಷೆ ಕೇವಲ 15 ದಿನಗಳಲ್ಲಿ ಮುಗಿದಿದೆ. ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಗೆ ಎಲ್ಲ ಕಡೆ ಮಾನ್ಯತೆ ಇದೆ. ಆದರೆ ರಾಜ್ಯ ಸರ್ಕಾರ ಮಾಡುವ ಸಮೀಕ್ಷೆಗೆ ಬೆಲೆ ಇಲ್ಲ. ಜಾತಿಗಳ ನಡುವೆ ಕಂದಕ ತಂದು ಬೇಳೆ ಬೇಯಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಈ ಹುನ್ನಾರ ಮಾಡಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ ಇದರಿಂದಾಗಿ ಸರ್ಕಾರಕ್ಕೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ನಡೆಸುವ ಗಣತಿಗೆ ರಾಜ್ಯ ಸರ್ಕಾರ ಸಹಕಾರ ನೀಡಿದರೆ ಸಾಕು ಎಂದರು.
PublicNext
25/07/2025 11:05 am