", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/387839-1753428748-WhatsApp-Image-2025-07-25-at-12.58.29-PM-(1).jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ ಆರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದ...Read more" } ", "keywords": "school building collapse, children trapped, fatalities, rescue operation, debris, building accident, tragedy ", "url": "https://dashboard.publicnext.com/node" } VIDEO: ಶಾಲಾ ಕಟ್ಟಡ ಕುಸಿದು ಆರು ಮಕ್ಕಳ ದಾರುಣ ಸಾವು - 60 ಮಕ್ಕಳು ಅವಶೇಷಗಳಡಿ ಸಿಲುಕಿರುವ ಶಂಕೆ!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ಶಾಲಾ ಕಟ್ಟಡ ಕುಸಿದು ಆರು ಮಕ್ಕಳ ದಾರುಣ ಸಾವು - 60 ಮಕ್ಕಳು ಅವಶೇಷಗಳಡಿ ಸಿಲುಕಿರುವ ಶಂಕೆ!

ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ ಆರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದೆ.

ಇಂದು ಬೆಳಗ್ಗೆ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ಕನಿಷ್ಠ ಆರು ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಅಲ್ಲದೇ 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರು ಸಹ ಅಧಿಕಾರಿಗಳೊಂದಿಗೆ ಕೈಜೋಡಿಸಿದ್ದಾರೆ.

ರಾಜಸ್ಥಾನದ ಸಿಎಂ ಭಜನ್‌ಲಾಲ್ ಶರ್ಮಾ ಸಂತಾಪ ಸೂಚಿಸಿದ್ದು, ಈ ದುರ್ಘಟನೆ ಹೃದಯ ವಿದ್ರಾವಕವೆಂದು ಕಂಬನಿ ಮಿಡಿದಿದ್ದಾರೆ. ಗಾಯಾಳು ಮಕ್ಕಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Edited By : Abhishek Kamoji
PublicNext

PublicNext

25/07/2025 01:02 pm

Cinque Terre

54.32 K

Cinque Terre

7

ಸಂಬಂಧಿತ ಸುದ್ದಿ