", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1753436325-WhatsApp-Image-2025-07-25-at-3.08.38-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಬಿಜೆಪಿಯಿಂದ ಚುನಾವಣಾ ಆಯೋಗ ದುರುಪಯೋಗ ಎಂದು ರಾಹುಲ್ ಗಾಂಧಿ ಆರೋಪಕ್ಕೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಬಿಜೆಪಿ ಕ...Read more" } ", "keywords": "Bengaluru BJP misuse allegations, Congress comeback Karnataka, Vijayendra statement, election impact Karnataka, Karnataka politics news", "url": "https://dashboard.publicnext.com/node" }
ಬೆಂಗಳೂರು : ಬಿಜೆಪಿಯಿಂದ ಚುನಾವಣಾ ಆಯೋಗ ದುರುಪಯೋಗ ಎಂದು ರಾಹುಲ್ ಗಾಂಧಿ ಆರೋಪಕ್ಕೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ದುರುಪಯೋಗ ಆಗಿದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿತ್ತಾ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ , ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಇರ್ತಿದ್ರಾ ? ಎಂದು ಪ್ರಶ್ನಿಸಿದರು.
ಬಿಜೆಪಿಯಿಂದ ಚುನಾವಣಾ ಆಯೋಗ ದುರುಪಯೋಗ ಎಂದು ರಾಹುಲ್ ಗಾಂಧಿ ಆರೋಪಕ್ಕೆ ಸಿದ್ದರಾಮಯ್ಯ ಕೂಡ ಧ್ವನಿಗೂಡಿಸಿದ್ರು. ಇದು ಹೇಗೆ ಆಗಿದೆ ಅಂದ್ರೆ ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಎಂಬಂತಿದೆ ಕಾಂಗ್ರೆಸ್ ಸ್ಥಿತಿ. ಕಾಂಗ್ರೆಸ್ ಈ ರೀತಿ ಆರೋಪ ಚುನಾವಣಾ ಆಯೋಗವನ್ನ ಅವಮಾನಿಸಿದಂತಾಗಿದೆ. ರಾಹುಲ್, ಸಿದ್ದರಾಮಯ್ಯ, ಡಿಕೆಶಿ ಹೇಳಿಕೆ ಅಪಾಯಕಾರಿ ಬೆಳವಣಿಗೆ. ಈ ಕೂಡಲೇ ಸಿಎಂ ಮತ್ತು ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ನ ತುರ್ತು ಪರಿಸ್ಥಿತಿ ಮನಸ್ಥಿತಿ ಬದಲಾಗಿಲ್ಲ, ಏನಾದ್ರು ಹೇಳೋದಿದ್ರೆ ಸುಪ್ರೀಂ ಕೋರ್ಟ್ ನಲ್ಲಿ ಹೇಳಿಕೆ ಕೊಡಲಿ, ಜನರು ವಿಶ್ವಾಸ ಇಟ್ಟಿರುವ ಸಂಸ್ಥೆ ಮೇಲೆ ಕೊಡಲಿಪೆಟ್ಟು ಕೊಡುವ ಕೆಲಸ ಮಾಡ್ತಿದಾರೆ ಎಂದು ಕಾಂಗ್ರೆಸ್ ನಡೆಯ ವಿರುದ್ಧ ವಾಗ್ದಾಳಿ ನಡೆಸಿದರು.
PublicNext
25/07/2025 03:11 pm