", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/463655-1753456496-manjunath-(73).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದೆಹಲಿ : ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ,...Read more" } ", "keywords": ""CM Siddaramaiah, caste census survey, backward classes, social justice, Karnataka government, caste-based survey, economic survey, social welfare, Delhi news, Siddaramaiah government, caste system reform" ", "url": "https://dashboard.publicnext.com/node" } ದೆಹಲಿ : ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ- ಸಿಎಂ ಸಿದ್ದರಾಮಯ್ಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ : ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ- ಸಿಎಂ ಸಿದ್ದರಾಮಯ್ಯ

ದೆಹಲಿ : ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎಐಸಿಸಿ ಒಬಿಸಿ ಸಭೆ ಬಳಿಕ ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗೊಷ್ಠಿ ನಡೆಸಿದ ಸಿಎಂ, ಪ್ರತಿಯೊಬ್ಬ ಪ್ರಜೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಔದ್ಯೋಗಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯುವುದು ಅತ್ಯಗತ್ಯ. ನಮ್ಮ ಸಂವಿಧಾನ ಸಾಮಾಜಿಕ ನ್ಯಾಯವನ್ನು ಬೆಂಬಲಿಸುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸಮಾನತೆಯೆಂಬುದು ದೇಶದಲ್ಲಿ ಸ್ಥಾಪಿತವಾಗಿದೆಯೇ ಎಂಬ ಬಗ್ಗೆ ತಿಳಿದುಕೊಳ್ಳಲು ಇಂತಹ ಸಮೀಕ್ಷೆ ನಡೆಸಲೇಬೇಕಾಗುತ್ತದೆ. ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಲು ರಾಹುಲ್ ಗಾಂಧಿಯವರು ಬದ್ಧರಾಗಿದ್ದಾರೆ. ಕೇವಲ ಜಾತಿಗಣತಿ ಮಾಡುವ ಜೊತೆಗೆ ಆರ್ಥಿಕ ಸಾಮಾಜಿಕ ಸಮೀಕ್ಷೆ ನಡೆಸಿದಾಗ ಮಾತ್ರ, ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ. ಇದು ಭಾಗೀಧಾರಿ ನ್ಯಾಯ ಸಮ್ಮೇಳನದ ಮೂಲ ಉದ್ದೇಶ ಎಂದು ವಿವರಿಸಿದರು. ಮುಂದಿನ ದಿನಗಳಲ್ಲಿ ದೇಶದೆಲ್ಲೆಡೆ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Edited By :
PublicNext

PublicNext

25/07/2025 08:45 pm

Cinque Terre

14.97 K

Cinque Terre

1

ಸಂಬಂಧಿತ ಸುದ್ದಿ