", "articleSection": "Politics,Government,Agriculture", "image": { "@type": "ImageObject", "url": "https://prod.cdn.publicnext.com/s3fs-public/229640-1753496079-bng2.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ. ರೈತರು ಆತಂಕಕ್ಕೆ ಈಡಾಗಬಾರದು, ಅಲ್ಲದೆ ಬೇಡಿಕೆ ಹೆಚ್ಚಿರು...Read more" } ", "keywords": "Bengaluru, fertilizer supply, shortage denial, Chaluvayya Swamy, Karnataka agriculture, fertilizer availability.", "url": "https://dashboard.publicnext.com/node" } ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ - ಚಲುವರಾಯಸ್ವಾಮಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ - ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ. ರೈತರು ಆತಂಕಕ್ಕೆ ಈಡಾಗಬಾರದು, ಅಲ್ಲದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚುವರಿ ಉಳಿಕೆ ಇರುವ ಇತರೆಡೆಗಳಿಂದ ವರ್ಗಾವಣೆ ಮಾಡಿ ಸರಿದೂಗಿಸಲಾಗುವುದು ಎಂದು ಕೃಷಿ ಸಚಿವರಾದ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಕಾಸ ಸೌಧದಲ್ಲಿ‌ ಮಾತನಾಡಿದ ಅವರು, ರೈತರಿಗೆ ಯಾವುದೇ ರೀತಿ ತೊಂದರೆಗಳಾಗದಂತೆ ನಿಗಾ ವಹಿಸಲು ಇಲಾಖೆಯ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ವರ್ಷ ಮುಂಗಾರು ಬೇಗ ಆರಂಭವಾದ ಕಾರಣ ಹಾಗೂ ಸುಮಾರು 2 ಲಕ್ಷ ಹೆಕ್ಟೇರ್ ಮುಸಿಕನ ಜೋಳ ಪ್ರದೇಶ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ. ಕೆಲವು ರೈತರು ಆತಂಕದಿಂದ ಆಗಸ್ಟ್ - ಸೆಪ್ಟೆಂಬರ್ ಗೆ ಬೇಕಾದ ಗೊಬ್ಬರವನ್ನ ಈಗಲೇ ಖರೀದಿಸಲು ಮುಂದಾಗಿದ್ದು, ಸಹ ತಕ್ಷಣ ಬೇಡಿಕೆ ಹೆಚ್ಚಲು ಕಾರಣವಾಗಿರಬಹುದು ಎಂದರು.

ರಾಜ್ಯದಲ್ಲಿ ನಮ್ಮ ಗುರಿಗಿಂತ ಹೆಚ್ಚಿನ ದಾಸ್ತಾನು ಲಭ್ಯವಿದೆ, ಜುಲೈ ತಿಂಗಳ ಬೇಡಿಕೆಯಂತೆ ಆಧಾರದಲ್ಲಿನ ವಿತರಣೆಯ ನಂತರವೂ ದಾಸ್ತಾನು ಉಳಿಕೆ ಇದೆ ಒಂದು ವೇಳೆ ಕೆಲವು ನಿರ್ಧಿಷ್ಟ ಪ್ರದೇಶಗಳಲ್ಲಿ ಯೂರಿಯಾ ಸೇರಿದಂತೆ ರಸಗೊಬ್ಬರದ ಕೊರತೆ ಕಂಡುಬಂದಲ್ಲಿ ಹೆಚ್ಚುವರಿಯಾಗಿ ಉಳಿಕೆಯಾಗಿರುವ ಜಿಲ್ಲೆಗಳಿಂದ ಮರುವಿಂಗಡಣೆ ಮಾಡಿ, ಸರಬರಾಜು ಮಾಡಲಾಗುವುದು, ಕೃಷಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರ ನಿರಂತರವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಹ ಯೂರಿಯ ಶೀಘ್ರ ಪೂರೈಕೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಯಾವುದೇ ಸಮಸ್ಯೆಗಳಿಲ್ಲದಂತೆ ರಸಗೊಬ್ಬರ ಪೂರೈಕೆ ನಿವಾರಿಸಲು ಅಧಿಕಾರಿಗಳ ತಂಡಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು‌.

Edited By : Manjunath H D
PublicNext

PublicNext

26/07/2025 07:44 am

Cinque Terre

49.6 K

Cinque Terre

0

ಸಂಬಂಧಿತ ಸುದ್ದಿ