ಬೆಂಗಳೂರು: ನಟ ದರ್ಶನ್ ಮಧ್ಯರಾತ್ರಿ ಥೈಲ್ಯಾಂಡ್ ನಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. 10 ದಿನಗಳ ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದರ್ಶನ್ ಹೊರಬರುವ ವೇಳೆ ಅವರಿಗೆ ಭದ್ರತೆ ನೀಡಲಾಯ್ತು ಎಂಬುದು ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ನನಗೆ ಅದರ ಬಗ್ಗೆ ಗೊತ್ತಿಲ್ಲ. ಅವರು ಭದ್ರತೆ ಕೊಟ್ಟಿದ್ದಾರಾ, ಇಲ್ವಾ ಗೊತ್ತಿಲ್ಲ. ಬೇರೆ ರೀತಿಯಲ್ಲಿ ಮಾಡಿದ್ದಾರಾ ಏನೋ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಅದರ ಬಗ್ಗೆ ನಾನು ವಿಚಾರಿಸುತ್ತೇನೆ ಎಂದು ತಿಳಿಸಿದರು.
PublicNext
27/07/2025 08:57 am