", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/222042-1753669884-Canva---2025-07-28T080120.487.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಕೋಡಿಮಠದ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು...Read more" } ", "keywords": "DK Shivakumar next CM, Karnataka CM change, Siddaramaiah term ends, Congress high command decision, Karnataka leadership change, DK Shivakumar CM candidate, Siddaramaiah power-sharing pact, Karnataka politics news, Congress party leadership, DK Shivakumar supporters, ", "url": "https://dashboard.publicnext.com/node" } ಡಿಕೆಶಿಯೇ ಮುಂದಿನ ಸಿಎಂ - ಕೋಡಿಶ್ರೀ ಭವಿಷ್ಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಕೆಶಿಯೇ ಮುಂದಿನ ಸಿಎಂ - ಕೋಡಿಶ್ರೀ ಭವಿಷ್ಯ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಕೋಡಿಮಠದ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.

ಸಿಎಂ ಬದಲಾವಣೆ ಕುರಿತು ಇತ್ತೀಚೆಗೆ ಹಾಸನ ಜಿಲ್ಲೆಯ ಅರಸೀಕೆರೆ ಕೋಡಿಮಠದ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯವನ್ನು ನುಡಿದಿದ್ದರು. ಹಾಲು ಕೆಟ್ಟರೂ, ಹಾಲುಮತ ಸಮುದಾಯ ಕೆಡುವುದಿಲ್ಲ ಎಂದು ಹೇಳಿದ್ದರು. ಅಂದರೆ, ಸಿದ್ದರಾಮಯ್ಯ ಅವರು ಅವರಾಗಿಯೇ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕು. ಬಲವಂತವಾಗಿ ಅವರನ್ನು ಇಳಿಸಲು ಸಾಧ್ಯ ಇಲ್ಲ ಎಂದು ಹೇಳಿದ್ದರು. ಈ ಹಿನ್ನಲೆ ಡಿ.ಕೆ.ಶಿ, ಕೋಡಿ ಶ್ರೀಗಳನ್ನು ಭೇಟಿ ಆಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಅರಸೀಕೆರೆಯ ಕೋಡಿ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌ ಅವರು ಗೌಪ್ಯ ಸಭೆ ನಡೆಸಿದ್ದರು. ನಂತರ ಮಾತನಾಡಿದ್ದ ಡಿಕೆ ಶಿವಕುಮಾರ್‌ ಅವರು, ಶಿವಲಿಂಗ ಅಜ್ಜಯ್ಯ ಗದ್ದುಗೆಗೆ ಪೂಜೆ ಸಲ್ಲಿಸಿದ್ದೇನೆ. ಮುಂದೆ ಎಲ್ಲವೂ ಒಳ್ಳೇದಾಗಲಿದೆ ಎಂದು ಹೇಳಿದ್ದರು. ನಾವು ಎಲ್ಲರ ಸಂಸ್ಕೃತಿಗೆ ಬೆಲೆ ಕೊಡುತ್ತೇವೆ ಎಂದು ಹೇಳಿದ್ದರು.

ಡಿಕೆಶಿ ಕೋಡಿ ಮಠ ಶ್ರೀ ಭೇಟಿ ಬಳಿಕ ಹೊಸ ಚರ್ಚೆ ಶುರುವಾಗಿದೆ. ಡಿಕೆಶಿ ಮಾತ್ರ ಯಾವುದಕ್ಕೂ ತುಟಿಕ್ ಪಿಟಿಕ್ ಅನ್ನದೆ ಸೈಲೆಂಟಾಗಿಯೇ ಗೇಮ್ ಆಡ್ತಿದ್ದಾರೆ.

ಸರ್ಕಾರಿ ಕಾರ್ಯಕ್ರಮ ನಿಮಿತ್ತ ಅರಸೀಕೆರೆಗೆ ಸಿಎಂ ಸಿದ್ದರಾಮಯ್ಯ ಜೊತೆ ಹೆಲಿಕಾಪ್ಟರ್‌ನಲ್ಲಿ ಬಂದಿದ್ದ ಡಿ.ಕೆ.ಶಿವಕುಮಾರ್ ನಂತರ ಅಲ್ಲಿಂದ ದೇವಾಲಯಗಳಿಗೆ ಭೇಟಿ ನೀಡಿದ್ದು, ಅರಸೀಕೆರೆ ಜೇನುಕಲ್ಲು ಸಿದ್ದೇಶ್ವರ ಬೆಟ್ಟದ ಮೆಟ್ಟಿಲುಗಳಿಗೆ, ಬಳಿಕ ಜೇನುಕಲ್ಲು ಸಿದ್ದೇಶ್ವರ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಬಳಿಕ ಕೋಡಿಮಠಕ್ಕೆ ಭೇಟಿ ನೀಡಿ ಬಂದ ವೇಳೆ ಮಾಧ್ಯಮದವರು ಪ್ರಶ್ನೆ ಕೇಳುವಾಗ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರೇ ಮುಂದಿನ ಸಿಎಂ ಎಂಬ ಘೋಷಣೆಗಳನ್ನು ಕೂಗಿದ್ದರು. ಆಗಲೂ ಡಿಸಿಎಂ ಡಿಕೆಶಿ ಏನನ್ನೂ ಮಾತಾಡದೆ ಸುಮ್ಮನಿದ್ದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು.

Edited By : Vijay Kumar
PublicNext

PublicNext

28/07/2025 08:02 am

Cinque Terre

44.72 K

Cinque Terre

1

ಸಂಬಂಧಿತ ಸುದ್ದಿ