ದೇಶೀಯ ಟೆಕ್ ದೈತ್ಯ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಚಲನಾತ್ಮಕ ನಿರ್ಧಾರ ತೆಗೆದುಕೊಂಡಿದೆ. ಭಾರಿ ಪ್ರಮಾಣದಲ್ಲಿ ಉದ್ಯೋಗ ಕಡಿತಕ್ಕೆ ಸಿದ್ಧವಾಗಿದ್ದು, ತನ್ನ ಉದ್ಯೋಗಿಗಳಿಗೆ ಅಚ್ಚರಿಯ ಆಘಾತ ನೀಡಿದೆ.
2026ರ ಏಪ್ರಿಲ್ ನಂತರದಿಂದ ಜಗತ್ತಿನಾದ್ಯಂತ ತಮ್ಮ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಒಟ್ಟು ಉದ್ಯೋಗಿಗಳ ಸಂಖ್ಯೆಯಲ್ಲಿ ಶೇ. 2ರಷ್ಟು ಉದ್ಯೋಗಿಗಳನ್ನು ವಜಾ ಮಾಡಲು ಯೋಜನೆ ರೂಪಿಸುತ್ತಿರುವುದಾಗಿ ತಿಳಿಸಿದೆ.
ಅಂದರೆ, ಸುಮಾರು 12 ಸಾವಿರಕ್ಕೂ ಹೆಚ್ಚು ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ. ದಿಢೀರನೆ ಉದ್ಯೋಗ ಕಡಿತ ಘೋಷಿಸಿದ್ದರಿಂದ ಐಟಿ ಉದ್ಯೋಗಿಗಳಲ್ಲಿ ಆತಂಕ ಮೂಡಿದೆ. ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಟಿಸಿಎಸ್ ಸಿಇಒ ಕೆ. ಕೃತಿವಾಸನ್ ಈ ವಿಷಯವನ್ನು ತಿಳಿಸಿದ್ದಾರೆ.
ಟೆಕ್ನಾಲಜಿ ಕ್ಷೇತ್ರದಲ್ಲಿ ನಡೆಯುತ್ತಿರುವ ಬದಲಾವಣೆಗಳಿಗೆ ಅನುಗುಣವಾಗಿ, ಭವಿಷ್ಯದ ಬೆಳವಣಿಗೆಗಳಿಗೆ ಸಂಸ್ಥೆಯನ್ನು ಸಿದ್ಧಪಡಿಸುವ ಉದ್ದೇಶದಿಂದಲೇ ಈ ವಜಾ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಟಿಸಿಎಸ್ ಸಿಇಒ ಕೃತಿವಾಸನ್ ತಿಳಿಸಿದ್ದಾರೆ.
PublicNext
28/07/2025 03:24 pm