", "articleSection": "Crime,Law and Order,International", "image": { "@type": "ImageObject", "url": "https://prod.cdn.publicnext.com/s3fs-public/222042-1753760037-Canva---2025-07-29T090340.150.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸನಾ: ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಸರ್ಕಾರವು ಸಂಪೂರ್ಣವಾಗಿ ರದ್ದುಗೊಳಿಸಿದೆ. ಈ ಸಂಬಂಧ ಭಾರತದ ಗ್ರ್ಯಾಂಡ್ ಮುಫ್...Read more" } ", "keywords": "Indian nurse death sentence commuted, Yemeni government pardon, Nimisha Priya case, Indian citizen death sentence, Yemen court ruling, nurse sentenced to death, diplomatic intervention, India-Yemen relations, death penalty commuted, ", "url": "https://dashboard.publicnext.com/node" }
ಸನಾ: ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಸರ್ಕಾರವು ಸಂಪೂರ್ಣವಾಗಿ ರದ್ದುಗೊಳಿಸಿದೆ. ಈ ಸಂಬಂಧ ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬುಬಕರ್ ಮುಸ್ಲಿಯಾರ್ ಅವರ ಕಚೇರಿ ಸೋಮವಾರ (ಜುಲೈ 28ರಂದು) ಮಾಹಿತಿ ನೀಡಿದೆ.
"ಈ ಹಿಂದೆ ಅಮಾನತುಗೊಂಡಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ಸಂಪೂರ್ಣವಾಗಿ ರದ್ದುಪಡಿಸಲಾಗಿದೆ" ಎಂದು ಗ್ರ್ಯಾಂಡ್ ಮುಫ್ತಿ ಕಚೇರಿಯ ಹೇಳಿಕೆ ತಿಳಿಸಿದೆ.
ತಿಂಗಳುಗಳ ಕಾಲ ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್‌ನ ರಾಜಧಾನಿ ಸನಾದಲ್ಲಿ ನಡೆದ ಕೊನೆಯ ಕ್ಷಣದ ಸಭೆಯ ನಂತರ ಈ ಘೋಷಣೆ ಹೊರಬಿದ್ದಿದ್ದು, ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲೈಯರ್ ಮಧ್ಯಪ್ರವೇಶಿಸಿ ಮರುಪರಿಶೀಲಿಸುವಂತೆ ಯೆಮೆನ್ ಅಧಿಕಾರಿಗಳನ್ನು ವಿನಂತಿಸಿದ ನಂತರ, ಜುಲೈ 16 ರಂದು ನಡೆಯಬೇಕಿದ್ದ ಆಕೆಯ ಮರಣದಂಡನೆಯನ್ನು ಒಂದು ದಿನ ಮೊದಲು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು.
ನಿಮಿಷಾ ಅವರನ್ನು ಸುರಕ್ಷಿತವಾಗಿ ಮನೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಸುಪ್ರೀಂ ಕೋರ್ಟ್ ನಲ್ಲಿ ಹೇಳಿದರು. ಬಲವಾದ ರಾಜತಾಂತ್ರಿಕ ಕ್ರಮಗಳ ಕೋರಿಕೆಯನ್ನು ಆಲಿಸುತ್ತಿರುವ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಆಗಸ್ಟ್ 14 ಕ್ಕೆ ನಿಗದಿಪಡಿಸಿದೆ.
PublicNext
29/07/2025 09:04 am