", "articleSection": "Entertainment,Crime,Cinema,News", "image": { "@type": "ImageObject", "url": "https://prod.cdn.publicnext.com/s3fs-public/421698-1753777577-3~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SrinivasCrimeBng" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್, ಸಂದೇಶ ರವಾನಿಸುತ್ತಿದ್ದ 30ಕ್ಕೂ ಅಧಿಕ ಇನ್ಸ್ಟಾಗ್ರಾಂ ಖಾತೆಗಳ ವಿರುದ್ಧ ನಟಿ ರಮ್ಯಾ ನ...Read more" } ", "keywords": "Ramya complaint police Ramya abuse case Bengaluru CCB investigation DCP-led investigation Ramya Karnataka actress harassment Online abuse against actresses Social media trolling Ramya Ramya files complaint Cybercrime against celebrities Bengaluru Karnataka India Bengaluru Police Bengaluru CCB", "url": "https://dashboard.publicnext.com/node" }
ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್, ಸಂದೇಶ ರವಾನಿಸುತ್ತಿದ್ದ 30ಕ್ಕೂ ಅಧಿಕ ಇನ್ಸ್ಟಾಗ್ರಾಂ ಖಾತೆಗಳ ವಿರುದ್ಧ ನಟಿ ರಮ್ಯಾ ನೀಡಿದ ದೂರಿನನ್ವಯ ಎಫ್ಐಆರ್ ದಾಖಲಾಗಿದೆ.
ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಸಂದೇಶ ರವಾನೆ, ಕಾಮೆಂಟ್ ಮಾಡುತ್ತಿದ್ದವರ ವಿರುದ್ಧ ಜುಲೈ 28ರಂದು ಖುದ್ದು ರಮ್ಯಾ ಅವರೇ ತೆರಳಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು.
ಅದರನ್ವಯ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 2023ರ 351(2) (ಕ್ರಿಮಿನಲ್ ಬೆದರಿಕೆಯ ಉದ್ದೇಶದ ಅಪರಾಧ), 351(3) (ಸಾವು, ತೀವ್ರ ನೋವುಂಟು ಮಾಡುವ ಉದ್ದೇಶದ ಕ್ರಿಮಿನಲ್ ಬೆದರಿಕೆ), 352 (ಉದ್ದೇಶಪೂರ್ವಕ ಅವಮಾನದ ಮೂಲಕ ಶಾಂತಿಭಂಗದ ಯತ್ನ), 75(1) (ಲೈಂಗಿಕ ಕಿರುಕುಳ) 75(1)(IV) (ಲೈಂಗಿಕ ಟೀಕೆ) ಹಾಗೂ 79 (ಮಹಿಳೆಯ ಗೌರವಕ್ಕೆ ಧಕ್ಕೆ) ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸಿಸಿಬಿಗೆ ಪ್ರಕರಣ ವರ್ಗಾವಣೆ!
ಪ್ರಕರಣದ ತನಿಖೆಯನ್ನ ಸಿಸಿಬಿಗೆ ವಹಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ದೂರಿನನ್ವಯ ನಿನ್ನೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಪ್ರಕರಣವನ್ನ ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ಜಂಟಿ ಆಯುಕ್ತರ ಮೇಲ್ವಿಚಾರಣೆಯಲ್ಲಿ ಓರ್ವ ಡಿಸಿಪಿ ಮಟ್ಟದ ಅಧಿಕಾರಿಯಿಂದ ಪ್ರಕರಣದ ತನಿಖೆ ನಡೆಯಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಇನ್ನೂ ಈಗಾಗ್ಲೆ ಸೈಬರ್ ಕ್ರೈಮ್ ಪೊಲೀಸರು ಇನ್ಸ್ಟಾಗ್ರಾಮ್‌ಗೆ ಪತ್ರ ಬರೆದು ಇನ್ಸ್ಟಾಗ್ರಾಂ ಖಾತೆದಾರರ ಮಾಹಿತಿ ಕೇಳಿದ್ದಾರೆ.
PublicNext
29/07/2025 01:56 pm