", "articleSection": "Crime,Law and Order,Cinema", "image": { "@type": "ImageObject", "url": "https://prod.cdn.publicnext.com/s3fs-public/387839-1753780222-Untitled-design---2025-07-29T144401.570.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ನಟಿ ರಮ್ಯಾ ಅಶ್ಲೀಲ ಕಾಮೆಂಟ್ ಹಾಗೂ ಮೆಸೇಜ್ ವಿರುದ್ಧ ದೂರು ನೀಡಿದ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳ...Read more" } ", "keywords": "Shivarajkumar, Ramya, Support, Social Media Post, Actor Couple, Kannada Cinema, Solidarity, Public Figures ", "url": "https://dashboard.publicnext.com/node" }
ಬೆಂಗಳೂರು: ನಟಿ ರಮ್ಯಾ ಅಶ್ಲೀಲ ಕಾಮೆಂಟ್ ಹಾಗೂ ಮೆಸೇಜ್ ವಿರುದ್ಧ ದೂರು ನೀಡಿದ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ರಮ್ಯಾ ಅವರು ಒಟ್ಟು 43 ಅಕೌಂಟ್ಸ್ ಉಲ್ಲೇಖಿಸಿ ಕಮಿಷನರ್ಗೆ ದೂರು ನೀಡಿದ್ದಾರೆ.
ಇದೆಲ್ಲದರ ಮಧ್ಯೆ ಈಗ ನಟಿ ರಮ್ಯಾ ಬೆಂಬಲಕ್ಕೆ ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಬೆಂಬಲಕ್ಕೆ ಬಂದಿದ್ದಾರೆ. ದಂಪತಿ ಈ ಬಗ್ಗೆ ಧ್ವನಿ ಎತ್ತಿ ಬರೆದುಕೊಂಡಿದ್ದಾರೆ.
'ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ, ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ- ಅಸೂಯೆಯನ್ನು ಬಿತ್ತಲು ಬಳಸಬಾರದು ಎಂದಿದ್ದಾರೆ.
ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದೂ ಬೆಂಬಲ ವ್ಯಕ್ತಪಡಿಸಿದ್ದಾರೆ.
PublicNext
29/07/2025 02:40 pm