ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಶಾಸಕರ ಜೊತೆ ಸಿಎಂ ಸಭೆಗೆ ಡಿಸಿಎಂ ಡಿಕೆಶಿಗೆ ಆಹ್ವಾನವಿಲ್ಲ..! ಇದಕ್ಕೆ ಡಿಕೆಶಿ ಕೊಟ್ಟ ಉತ್ತರವೇನು?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ ಎಂದು ಡಿಸಿಎಂ‌ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಭೆಗೆ ತಮನ್ನ ಆಹ್ವಾನಿಸದ ಪ್ರಶ್ನೆಗೆ ಉತ್ತರಿಸಿದ ಅವರು, ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ. ಈ ಬಗ್ಗೆ ನನಗೆ ಯಾವುದೇ ಆಕ್ಷೇಪ ಇಲ್ಲ. ಈ ವಿಚಾರದಲ್ಲಿ ನನಗೆ ಏನೂ ಕಷ್ಟವಾಗದಿದ್ದರೂ, ನಿಮಗೆ ಏಕೆ ಕಷ್ಟವಾಗುತ್ತಿದೆ ಎಂದರು. ನೀವು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿದ್ದು ನಿಮ್ಮನ್ನು ಸಭೆಗೆ ಕರೆದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ದಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಾನು ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದೇನೆ ಎಂದರು.

ಉಪಮುಖ್ಯಮಂತ್ರಿಗಳನ್ನು ಸಿಎಂ ಕಡೆಗಣಿಸಿದೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಉತ್ತರಿಸಿದ ಅವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದ ಒಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ. ಅವರ ಮಧ್ಯೆಯೇ ಸಾಕಷ್ಟು ತಿಕ್ಕಾಟಗಳು ನಡೆಯುತ್ತಿವೆ. ಮೊದಲು ಅವರ ಸಮಸ್ಯೆಗಳನ್ನು ಸರಿಮಾಡಿಕೊಳ್ಳಲಿ ಎಂದರು.

Edited By :
PublicNext

PublicNext

29/07/2025 04:55 pm

Cinque Terre

17.5 K

Cinque Terre

1

ಸಂಬಂಧಿತ ಸುದ್ದಿ