ನವದೆಹಲಿ: ಪೆಹಲ್ಗಾಮ್ ದಾಳಿಗೆ ಭದ್ರತಾ ವೈಫಲ್ಯವೇ ಕಾರಣ ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದ್ದಾರೆ.
ರಾಜ್ಯಸಭಾ ಅಧಿವೇಶನದಲ್ಲಿ 'ಆಪರೇಶನ್ ಸಿಂಧೂರ' ಕುರಿತು ಚರ್ಚೆಯಲ್ಲಿ ಮಾತನಾಡಿದ ಅವರು, ಪೆಹಲ್ಗಾಮ್ ದಾಳಿಗೆ ಭದ್ರತಾ ವೈಫಲ್ಯವೇ ಕಾರಣ ಎಂಬುದನ್ನು ಸ್ವತಃ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಒಪ್ಪಿಕೊಂಡಿದ್ದಾರೆ. ಈ ಮಾತನ್ನು ಅವರು ಜುಲೈ 14ರಂದೇ ಹೇಳಿದ್ದಾರೆ. ಆದರೆ ಕೇಂದ್ರ ಸರಕಾರವು ಈ ಮಾತನ್ನು ಒಪ್ಪಿಕೊಳ್ಳುತ್ತಿಲ್ಲ. ಪೆಹಲ್ಗಾಮ್ ಘಟನೆಗೆ ನೇರವಾಗಿ ಗೃಹ ಸಚಿವರು, ರಕ್ಷಣಾ ಸಚಿವರು, ಹಾಗೂ ಕೇಂದ್ರ ಸರಕಾರವೇ ಹೊಣೆ ಎಂದು ಈ ವೇಳೆ ಖರ್ಗೆ ಹೇಳಿದ್ದಾರೆ.
PublicNext
29/07/2025 05:47 pm