ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸ್ಥಾನ ತಪ್ಪಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ. ಕೆ ಶಿವಕುಮಾರ್, ಇದರಲ್ಲಿ ತಪ್ಪೇನಿದೆ. ಹಿರಿಯ ನಾಯಕರು ಅವರು, ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಭಾವನೆಗಳನ್ನು ಹೇಳಿಕೊಂಡಿದ್ದಾರೆ. ಇದರಲ್ಲಿ ಯಾವ ತರಹದ್ದು ತಪ್ಪೇನಿಲ್ಲ. ರಾಜ್ಯ ರಾಜಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಮರಳಿ ಬರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆಯೂ ಚರ್ಚೆ ಮಾಡುವುದರಲ್ಲಿ ತಪ್ಪೇನಿದೆ. ಅವರವರ ಅಭಿಪ್ರಾಯ ಅವರು ತಿಳಿಸುತ್ತಾರೆ ಆದ್ರೆ ಇದು ಬಹಿರಂಗ ಚರ್ಚೆ ಆಗುವುದು ಬೇಡ ಎಂದು ತಿಳಿಸಿದರು.
PublicNext
29/07/2025 07:24 pm