", "articleSection": "Politics,Business,International", "image": { "@type": "ImageObject", "url": "https://prod.cdn.publicnext.com/s3fs-public/222042-1753931842-Canva---2025-07-31T084604.648.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ವಾಷಿಂಗ್ಟನ್: ಪಾಕಿಸ್ತಾನವು ಮುಂದೊಂದು ದಿನ ಭಾರತಕ್ಕೆ ತೈಲವನ್ನು ಮಾರಾಟ ಮಾಡಬಹುದು’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾರ್ಮಿಕವಾಗಿ...Read more" } ", "keywords": "Donald Trump, India-Pakistan oil deal, Trump prediction, oil trade between India and Pakistan, US President comments, India-Pakistan relations, oil imports, energy cooperation, Trump on India-Pakistan, international oil market, geopolitical relations, ", "url": "https://dashboard.publicnext.com/node" }
ವಾಷಿಂಗ್ಟನ್: ಪಾಕಿಸ್ತಾನವು ಮುಂದೊಂದು ದಿನ ಭಾರತಕ್ಕೆ ತೈಲವನ್ನು ಮಾರಾಟ ಮಾಡಬಹುದು’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾರ್ಮಿಕವಾಗಿ ನುಡಿದಿದ್ದಾರೆ.
ಟ್ರಂಪ್ ಭಾರತಕ್ಕೆ ಭಾರಿ ಸುಂಕ ವಿಧಿಸಿದ ಬೆನ್ನಲ್ಲೇ ಪಾಕ್ ಜತೆಗಿನ ವ್ಯವಹಾರ ಘೋಷಿಸಿರುವುದು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ.
‘ಟ್ರುಥ್ ಸೋಷಿಯಲ್’ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಟ್ರಂಪ್, ‘ಬೃಹತ್ ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸಲು ಪಾಕಿಸ್ತಾನ ಮತ್ತು ಅಮೆರಿಕ ಒಟ್ಟಾಗಿ ಕೆಲಸ ಮಾಡಲಿವೆ. ಈ ಪಾಲುದಾರಿಕೆಯನ್ನು ಮುನ್ನಡೆಸುವ ತೈಲ ಕಂಪನಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಯಾರಿಗೆ ಗೊತ್ತು ಭವಿಷ್ಯದಲ್ಲಿ ಪಾಕಿಸ್ತಾನದವರು ಭಾರತಕ್ಕೆ ತೈಲವನ್ನು ಮಾರಾಟ ಮಾಡಬಹುದು!’ ಎಂದು ಬರೆದಿದ್ದಾರೆ.
ಭಾರತದಿಂದ ಅಮೆರಿಕಕ್ಕೆ ಆಮದಾಗುವ ಎಲ್ಲ ಸರಕುಗಳ ಮೇಲೆ ಆಗಸ್ಟ್ 1ರಿಂದ ಶೇಕಡ 25ರಷ್ಟು ಸುಂಕ ವಿಧಿಸಲಾಗುತ್ತದೆ ಎಂದು ಘೋಷಿಸಿದ ಕೆಲವೇ ಗಂಟೆಗಳಲ್ಲಿ ಟ್ರಂಪ್, ಪಾಕ್ ಜತೆಗೆನ ಒಪ್ಪಂದ ಕುರಿತು ಪೋಸ್ಟ್ ಹಂಚಿಕೊಂಡಿದ್ದಾರೆ.
ಜಗತ್ತಿನ ಐದನೇ ಅತಿದೊಡ್ಡ ಅರ್ಥ ವ್ಯವಸ್ಥೆಯನ್ನು ಹೊಂದಿರುವ ಭಾರತವು ರಷ್ಯಾದಿಂದ ಶಸ್ತ್ರಾಸ್ತ್ರ ಮತ್ತು ಕಚ್ಚಾ ತೈಲ ಖರೀದಿಸುತ್ತಿರುವುದಕ್ಕಾಗಿ ಆಗಸ್ಟ್ 1ರಿಂದ ಒಂದಿಷ್ಟು ದಂಡವನ್ನು ಕೂಡ ತೆರಬೇಕಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಆದರೆ, ದಂಡದ ಕುರಿತಾಗಿ ಅವರು ಹೆಚ್ಚಿನ ವಿವರಣೆ ನೀಡಿಲ್ಲ.
PublicNext
31/07/2025 08:48 am