", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/52563-1753971648-29-072025.00_59_41_03.Still006.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ : ಭಾರತೀಯ ಆರ್ಥಿಕತೆಯನ್ನು ಸತ್ತ ಆರ್ಥಿಕತೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರ...Read more" } ", "keywords": "Rahul Gandhi Trump comment, Indian economy dead, BJP economic policies, Narendra Modi economy, Donald Trump tariffs, India economy news, Congress party statement, economic crisis India", "url": "https://dashboard.publicnext.com/node" } 'ಭಾರತದ ಆರ್ಥಿಕತೆ ಸತ್ತಿದೆ' ಟ್ರಂಪ್‌ ಹೇಳಿದ್ದು ಸರಿ : ರಾಹುಲ್ ಗಾಂಧಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಭಾರತದ ಆರ್ಥಿಕತೆ ಸತ್ತಿದೆ' ಟ್ರಂಪ್‌ ಹೇಳಿದ್ದು ಸರಿ : ರಾಹುಲ್ ಗಾಂಧಿ

ನವದೆಹಲಿ : ಭಾರತೀಯ ಆರ್ಥಿಕತೆಯನ್ನು 'ಸತ್ತ ಆರ್ಥಿಕತೆ' ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. 'ಟ್ರಂಪ್ ಹೇಳಿದ್ದು ಸರಿ. ಪ್ರಧಾನಿ ಮೋದಿ & ಹಣಕಾಸು ಸಚಿವರನ್ನು ಹೊರತುಪಡಿಸಿ, ಇಡೀ ಜಗತ್ತಿಗೆ ಭಾರತದ ಆರ್ಥಿಕತೆ "ಸತ್ತ ಆರ್ಥಿಕತೆ' ಎಂದು ತಿಳಿದಿದೆ. ಅದಾನಿಗೆ ಸಹಾಯ ಮಾಡಲು BJP ದೇಶದ ಆರ್ಥಿಕತೆಯನ್ನು ನಾಶಪಡಿಸಿದೆ. ಕದನ ವಿರಾಮ & ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಅವರ ಹೇಳಿಕೆಗಳಿಗೆ ಮೋದಿ ಏಕೆ ಪ್ರತಿಕ್ರಿಯಿಸುತ್ತಿಲ್ಲ?' ಎಂದು ಪ್ರಶ್ನಿಸಿದ್ದಾರೆ.

ಸಂಸತ್ ಭವನದ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ನಡೆಯುವ ಸಾಧ್ಯತೆಯಿದೆ ಮತ್ತು ಡೊನಾಲ್ಡ್ ಟ್ರಂಪ್ ಅದನ್ನು ರೂಪಿಸುತ್ತಾರೆ. ಆದರೆ, ಪ್ರಧಾನಿ ಮೋದಿ ಅಮೆರಿಕದ ಅಧ್ಯಕ್ಷ ಏನು ಹೇಳುತ್ತಾರೋ ಅದನ್ನು ಮಾಡುತ್ತಾರೆ ಎಂದು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಉತ್ಪನ್ನಗಳ ಮೇಲೆ ಶೇ 25ರಷ್ಟು ಸುಂಕ ವಿಧಿಸಿ ಆದೇಶ ಹೊರಡಿಸಿದ್ದು, 'ಭಾರತ ಮತ್ತು ರಷ್ಯಾ ಈಗಾಗಲೇ 'ಸತ್ತಿರುವ' ತಮ್ಮ ಆರ್ಥಿಕತೆಯನ್ನು ಒಟ್ಟಿಗೆ ಇನ್ನಷ್ಟು ನೆಲಕಚ್ಚುವಂತೆ ಮಾಡಿಕೊಳ್ಳುತ್ತವೆ. ಭಾರತದೊಂದಿಗೆ ನಾವು ಅತ್ಯಂತ ಕಡಿಮೆ ವ್ಯಾಪಾರವನ್ನು ಮಾಡಿದ್ದೇವೆ. ಅಮೆರಿಕದ ಉತ್ಪನ್ನಗಳಿಗೆ ಇತರ ರಾಷ್ಟ್ರಗಳು ವಿಧಿಸುವ ತೆರಿಗೆಗಿಂತ ಭಾರತದ ಸುಂಕ ಅತಿ ಹೆಚ್ಚು' ಎಂದು ಕರೆದ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಭಾರತದ ಆರ್ಥಿಕತೆಯ ಬಗ್ಗೆ ಟ್ರಂಪ್ ಅವರ ಟೀಕೆಯ ಬಗ್ಗೆ ಕೇಳಿದಾಗ, 'ಅವರು ಹೇಳಿದ್ದು ಸರಿ, ಪ್ರಧಾನಿ ಮತ್ತು ಹಣಕಾಸು ಸಚಿವರನ್ನು ಹೊರತುಪಡಿಸಿ, ಭಾರತದ ಆರ್ಥಿಕತೆ ಸತ್ತ ಆರ್ಥಿಕತೆ ಎಂಬುದು ಎಲ್ಲರಿಗೂ ತಿಳಿದಿದೆ. ಡೊನಾಲ್ಡ್ ಟ್ರಂಪ್ ಒಂದು ಸತ್ಯವನ್ನು ಹೇಳಿರುವುದು ನನಗೆ ಸಂತೋಷ ತಂದಿದೆ. ಬಿಲಿಯನೇರ್ ಗೌತಮ್ ಅದಾನಿಗೆ ಸಹಾಯ ಮಾಡಲು ಬಿಜೆಪಿ ಭಾರತದ ಆರ್ಥಿಕತೆಯನ್ನು ನಾಶಪಡಿಸಿದೆ ಎಂದು ಗಾಂಧಿ ಆರೋಪಿಸಿದ್ದಾರೆ.

Edited By : Nirmala Aralikatti
PublicNext

PublicNext

31/07/2025 07:59 pm

Cinque Terre

134.43 K

Cinque Terre

36

ಸಂಬಂಧಿತ ಸುದ್ದಿ