ಬೆಂಗಳೂರು: TCS ಸಾಫ್ಟ್‌ವೇರ್ ಕಂಪನಿ 12 ಸಾವಿರ ಉದ್ಯೋಗಿಗಳನ್ನು ತೆಗೆದುಹಾಕುತ್ತಿದೆ ಎಂಬ ವರದಿ ಹಿನ್ನೆಲೆಯಲ್ಲಿ ಯಾವ ಕಾರಣದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡಲು ಸೂಚಿಸಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
TCS ಸೇರಿದಂತೆ ದೊಡ್ಡ ಕಂಪನಿಗಳು ದೊಡ್ಡ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ತೆಗೆದುಹಾಕಬೇಕು ಎಂದರೆ ನಮಗೆ ಮಾಹಿತಿ ಒದಗಿಸಬೇಕು. ಈ ನಿಯಮದ ಅಡಿಯಲ್ಲೇ ಅವರಿಂದ ವಿವರಣೆ ಕೇಳಲಾಗಿದೆ. ನಮ್ಮ ಇಲಾಖೆಯ ಅಧಿಕಾರಿಗಳು ಟಿಸಿಎಸ್ ಪ್ರತಿನಿಧಿಗಳಿಗೆ ಕರೆ ಮಾಡಿ ಮಾಹಿತಿ ನೀಡಲು ಸೂಚಿಸಿದ್ದೇವೆ ಎಂದು ತಿಳಿಸಿದರು.
TCS ಸಾಫ್ಟ್‌ವೇರ್ ಕಂಪನಿಗಳಿಗೆ ಕಾರ್ಮಿಕ ಕಾನೂನುಗಳಿಂದ ವಿನಾಯತಿ ನೀಡಲಾಗಿದೆ ಆದರೆ ಕೆಲವಾರು ಷರತ್ತುಗಳು ಅವುಗಳಿಗೂ ಅನ್ವಯವಾಗುತ್ತವೆ ಆದ್ರೆ ಇಲ್ಲಿ ಉದ್ಯೋಗಿಗಳನ್ನ ತಗೆದುಹಾಕಿದ ಕ್ರಮಕ್ಕೆ ಅವರು ನಮ್ಮ ಇಲಾಖೆಗೆ ಮಾಹಿತಿ ನೀಡಬೇಕಿದೆ ಎಂದರು.
PublicNext
01/08/2025 11:46 am