", "articleSection": "Politics,Law and Order", "image": { "@type": "ImageObject", "url": "https://prod.cdn.publicnext.com/s3fs-public/52563-1754054449-_(1280-x-720-px)-(68).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸ...Read more" } ", "keywords": "Congress President Mallikarjun Kharge, private complaint filed, land scam allegations, AICC chief controversy, legal proceedings, Mallikarjun Kharge news, Congress party updates", "url": "https://dashboard.publicnext.com/node" } ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಖಾಸಗಿ ವ್ಯಕ್ತಿಯಿಂದ ದೂರು ದಾಖಲು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಖಾಸಗಿ ವ್ಯಕ್ತಿಯಿಂದ ದೂರು ದಾಖಲು

ಬೆಂಗಳೂರು : ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಲಾಗಿದೆ. ಸರ್ಕಾರದ ಜಮೀನು ಪಡೆದು ಅದನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ ಎಂದು ವಿಜಯ್ ರಾಘವನ್ ಎಂಬುವರು ಈ ದೂರು ಸಲ್ಲಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯನ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ಐದು ಎಕರೆ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ದೇವನಹಳ್ಳಿಯಲ್ಲಿರುವ ಏರೋಸ್ಪೇಸ್ ಪಾರ್ಕ್ ಬಳಿ ಸಿಎ ಸೈಟ್ ಮಂಜೂರು ಮಾಡಲಾಗಿತ್ತು.

ಏರೋಸ್ಪೇಸ್, ರಿಸರ್ಚ್ ಇತ್ಯಾದಿಗಳಲ್ಲಿ ಅನುಭವವಿಲ್ಲದಿದ್ದರೂ ಭರ್ತಿ ಮಾಡದ ಅರ್ಜಿ ಸಲ್ಲಿಸಿ ಐದು ಎಕರೆ ಭೂಮಿ‌‌ ಮಂಜೂರು ಮಾಡಿಕೊಂಡಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಮತ್ತು ಇವರ ಅಳಿಯನ ವಿರುದ್ಧ ವಿಜಯ ರಾಘವನ್ ಆರೋಪ ಮಾಡಿದ್ದಾರೆ.

ಇದಲ್ಲದೇ 2014ರಲ್ಲಿ ಬಿಟಿಎಂ 4ನೇ ಹಂತದಲ್ಲಿನ 2ನೇ ಬ್ಲಾಕ್ ನಲ್ಲಿ ಬಿಡಿಎ ವ್ಯಾಪ್ತಿಯ 2 ಎಕರೆ ಸಿಎ ನಿವೇಶವನ್ನು ಪರಭಾರೆ ಮಾಡಲಾಗಿದೆ. ಅಲ್ಲದೇ ದಲಿತರೆಂದು ಶೇ.50ರಷ್ಟು ಸಬ್ಸಿಡಿ ಕೂಡ ಪಡೆದಿದ್ದಾರೆ ಎಂಬುದಾಗಿಯೂ ಮತ್ತೊಂದು ಖಾಸಗಿ ದೂರಿನಲ್ಲಿ ಆರೋಪಿಸಿದ್ದಾರೆ.

ಇಂದು ವಿಜಯ್ ರಾಘವನ್ ಎಂಬುವರು ಸಲ್ಲಿಸಿ ಈ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ನಡೆಸಿತು. ಖಾಸಗಿ ದೂರುದಾರರ ಪರವಾಗಿ ವಕೀಲೆ ಲಕ್ಷ್ಮೀ ಐಯ್ಯಂಗಾರ್ ಮಂಡಿಸಿದ ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್.5ಕ್ಕೆ ವಿಚಾರಣೆ ಮುಂದೂಡಿದೆ.

Edited By : Nirmala Aralikatti
PublicNext

PublicNext

01/08/2025 07:05 pm

Cinque Terre

37.05 K

Cinque Terre

3

ಸಂಬಂಧಿತ ಸುದ್ದಿ