ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತ್ಯಾಚಾರದಲ್ಲಿ ಪ್ರಜ್ವಲ್ ರೇವಣ್ಣ ದೋಷಿ"ಎಲ್ಲಾ ಹೆಣ್ಣುಮಕ್ಕಳಿಗೂ ನ್ಯಾಯ ಸಿಕ್ಕಿದೆ" ಎಂದು ರಮ್ಯಾ ಪ್ರತಿಕ್ರಿಯೆ

ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದ ಬೆನ್ನಲ್ಲೆ ನಟಿ ರಮ್ಯಾ ಮಾಜಿ ಸಂಸದೆ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, “ಎಲ್ಲಾ ಹೆಣ್ಣುಮಕ್ಕಳಿಗೂ ನ್ಯಾಯ ಸಿಕ್ಕಿದೆ” ಎಂಬ ಬರಹವನ್ನೂ ಪೋಸ್ಟ್ ಮಾಡಿದ್ದಾರೆ.

ಈ ನಡುವೆ ನ್ಯಾಯಾಲಯ ದೋಷಿ ಘೋಷಿಸಿದ್ದ ತಕ್ಷಣವೇ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದೀಗ ನ್ಯಾಯಾಲಯ ದೋಷಿಗಳ ಕುರಿತ ತೀರ್ಪು ನೀಡಿದರೆ, ಶಿಕ್ಷೆಯ ಪ್ರಮಾಣವನ್ನು ನಾಳೆ ಘೋಷಿಸಲಾಗುವುದು ಎಂದು ಆದೇಶ ಹೊರಡಿಸಿದೆ.

Edited By :
PublicNext

PublicNext

01/08/2025 07:41 pm

Cinque Terre

15.92 K

Cinque Terre

0

ಸಂಬಂಧಿತ ಸುದ್ದಿ