", "articleSection": "Politics,Law and Order,Government", "image": { "@type": "ImageObject", "url": "https://prod.cdn.publicnext.com/s3fs-public/387839-1754111697-Untitled-design---2025-08-02T104906.767.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಶಿವಮೊಗ್ಗ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿದ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಕುರ...Read more" } ", "keywords": "Shivamogga poison tragedy, terrorist act comparison, strict action, CM directive, Karnataka government response. ", "url": "https://dashboard.publicnext.com/node" }
ಶಿವಮೊಗ್ಗ : ಶಿವಮೊಗ್ಗ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿದ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈ ಕುರಿತು ಎಕ್ಸ್ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, "ಹತ್ತಾರು ಎಳೆಯ ಮಕ್ಕಳ ಮಾರಣಹೋಮ ನಡೆಸುವ ದುರುದ್ದೇಶ ಹೊಂದಿದ್ದ ಈ ಕೃತ್ಯ, ಯಾವುದೇ ಭಯೋತ್ಪಾದಕ ಚಟುವಟಿಕೆಗಿಂತ ಕಡಿಮೆಯಿಲ್ಲ ಎಂಬುದು ನನ್ನ ಭಾವನೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಅಡುಗೆ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭೀಕರ ದುರಂತ ತಪ್ಪಿದಿದೆ. ಅವರನ್ನು ಅಭಿನಂದಿಸುತ್ತೇನೆ. ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ, ನಮ್ಮ ಸಮಾಜದಲ್ಲಿ ಮಾನವೀಯತೆಯ ಅಧಃಪತನವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಈ ಕುರಿತು ಪ್ರತಿಯೊಬ್ಬರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ" ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲಾ ಬಿಸಿಯೂಟ ಸಿಬ್ಬಂದಿ, ಹೆಡ್ ಟ್ಯಾಂಕ್‌ನ ನೀರಿನಲ್ಲಿ ಕೈ ತೊಳೆಯುವ ಸಂದರ್ಭದಲ್ಲಿ ನೀರಿನ ಬಣ್ಣ ಹಾಗೂ ವಾಸನೆ ಪ್ರತ್ಯೇಕವಾಗಿ ಕಂಡು ಬಂದಿದ್ದು, ತಕ್ಷಣವೇ ಅವರು ಶಾಲಾ ಮುಖ್ಯೋಪಾಧ್ಯಾಯರಿಗೆ ಮಾಹಿತಿ ನೀಡಿದರು.
ಶಾಲಾ ಆಡಳಿತ ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ ನಂತರ, ನೀರಿನ ಮಾದರಿ ಪರೀಕ್ಷಿಸಿ ಕೀಟನಾಶಕ ಬೆರೆಸಿರುವುದು ದೃಢಪಟ್ಟಿತು.
ಶಾಲೆಯ ಪಕ್ಕದಲ್ಲಿರುವ ಹಣ್ಣಿನ ಮರ ಹತ್ತಿ ಶಾಲೆಯ ಚಾವಣಿ ಮೂಲಕ ಟ್ಯಾಂಕ್ ಬಳಿ ಹೋಗಿ ಕಿಡಿಗೇಡಿಗಳು ಪ್ಲಾಸ್ಟಿಕ್ ಬಾಟಲಿಯ ಮೂಲಕ ಕೀಟನಾಶಕ ಸುರಿದಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಖಾಲಿ ಪ್ಲಾಸ್ಟಿಕ್ ಬಾಟಲಿಯೊಂದು ಪತ್ತೆಯಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
PublicNext
02/08/2025 10:45 am