", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/222042-1754117918-Canva---2025-07-29T133531.134.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿರುವ ಶವಗಳ ದಫನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ತೀವ್ರಗತಿಯಲ್ಲಿ ತನಿಖೆಯನ್ನು ಆರಂಭಿ...Read more" } ", "keywords": "Dharmasthala police controversy, unknown death cases records deleted, police criticism, Dharmasthala news updates, police records controversy, investigation criticism. ", "url": "https://dashboard.publicnext.com/node" }
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿರುವ ಶವಗಳ ದಫನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ತೀವ್ರಗತಿಯಲ್ಲಿ ತನಿಖೆಯನ್ನು ಆರಂಭಿಸಿದೆ. ಈ ಮಧ್ಯೆ ಬೆಳ್ತಂಗಡಿ ಪೊಲೀಸರು 2000 ದಿಂದ 2015ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳನ್ನು (UDR) ಡಿಲೀಟ್ ಆಗಿದ್ದಾಗಿ ಹೇಳಿದ್ದಾರೆ. ಇದು ತೀವ್ರ ಟೀಕೆಗೆ ಕಾರಣವಾಗಿದೆ.
2000 ದಿಂದ 2015ರ ಅವಧಿಯಲ್ಲಿ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಆರೋಪಿಸಿದ್ದಾನೆ. 1998 ಮತ್ತು 2014ರ ನಡುವೆ ಲೈಂಗಿಕ ಅತ್ಯಾಚಾರಕ್ಕೊಳಗಾದ ಮಹಿಳೆಯರು, ಅಪ್ರಾಪ್ತ ಬಾಲಕಿಯರು ಸೇರಿದಂತೆ ಹಲವು ಶವಗಳನ್ನು ನನಗೆ ಹೂಳಿಸಲಾಗಿದೆ ಎಂದು ಆರೋಪಿ ಹೇಳಿರುವುದರಿಂದ ಈಗ ದಾಖಲೆಗಳ ನಾಶಪಡಿಸುವಿಕೆ ತೀವ್ರ ಕಳವಳಕ್ಕೆ ಕಾರಣವಾಗಿದೆ.
ಮರಣೋತ್ತರ ಪರೀಕ್ಷೆಯ ವರದಿಗಳು, ನೋಟಿಸ್‌ಗಳು ಮತ್ತು ಮೃತ ವ್ಯಕ್ತಿಗಳ ಗುರುತನ್ನು ಪತ್ತೆಹಚ್ಚುವ ಪ್ರಯತ್ನಗಳಲ್ಲಿ ಬಳಸಲಾದ ಫೋಟೋಗಳನ್ನು ಆಡಳಿತಾತ್ಮಕ ಆದೇಶಗಳಿಗೆ ಅನುಗುಣವಾಗಿ ನಾಶಪಡಿಸಲಾಗಿದೆ ಎಂದು ಪೊಲೀಸರು ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯಿಸಿದ್ದಾರೆ.
ನಿರ್ದಿಷ್ಟವಾಗಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ (ಸಿಆರ್‌ಪಿಸಿ) ಸೆಕ್ಷನ್ 174(ಎ) ಅಡಿಯಲ್ಲಿ 15 ವರ್ಷಗಳ ಅವಧಿಯಲ್ಲಿ ದಾಖಲಾದ ಯುಡಿಆರ್ ವಿವರಗಳನ್ನು ಆರ್‌ಟಿಐ ಅಡಿ ಕೇಳಲಾಗಿತ್ತು. ಆರ್‌ಟಿಐ ಅಡಿ ಕೇಳಲಾದ ದಾಖಲೆಗಳು ಲಭ್ಯವಿಲ್ಲ, ವಿವಿಧ ಸುತ್ತೋಲೆಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.
ಈ ಸಂಬಂಧ ಕರ್ನಾಟಕ ಸರ್ಕಾರರ ಜೂನ್ 26, 2013ರ ಅಧಿಸೂಚನೆ ಮತ್ತು ನವೆಂಬರ್ 23, 2023 ರಂದು ಪೊಲೀಸ್ ಅಧೀಕ್ಷಕರು ಹೊರಡಿಸಿದ ಇತ್ತೀಚಿನ ಆದೇಶವನ್ನು ಉಲ್ಲೇಖಿಸಿದ್ದಾರೆ. ಉಳಿದ ಪ್ರಕರಣಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಆದರೆ ಕಾನೂನು ತಜ್ಞರು ಮತ್ತು ನಾಗರಿಕ ಸಂಘಟನೆಗಳು ಯುಡಿಆರ್ ಡಿಲೀಟ್ ಕಾನೂನುಬದ್ಧತೆ ಮತ್ತು ನೈತಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕ್ರಿಮಿನಲ್ ಪ್ರಕರಣದ ದಾಖಲೆಗಳನ್ನು ನಾಶಪಡಿಸಲು ಪೊಲೀಸ್ ಠಾಣೆಗಳಿಗೆ ಅಧಿಕಾರವಿಲ್ಲ ಎಂದು ಅವರು ವಾದಿಸಿದ್ದಾರೆ. ದಾಖಲೆಗಳನ್ನು ಡಿಲೀಟ್ ಮಾಡುವ ಮೊದಲು ಏಕೆ ಡಿಜಿಟಲೀಕರಣ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.
PublicNext
02/08/2025 12:28 pm