ಮಂಗಳೂರು: ಇನ್ಮಂದೆ ರೋಗಿಗಳಿಗೆ ರಾಜ್ಯ ಸರ್ಕಾರದಿಂದಲೇ ಸಿಟಿ, ಎಂಆರ್ ಐ ಸ್ಕ್ಯಾನ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳೂರಿನ ವೆನ್ಲಾಕ್‌ನಲ್ಲಿ ಶುಕ್ರವಾರ ಜರಗಿದ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, 'ರೋಗಿಗಳಿಗೆ ಮತ್ತಷ್ಟು ಉತ್ತಮ ಸೇವೆ ನೀಡುವುದು ಉದ್ದೇಶದಿಂದ ಜಿಲ್ಲಾ ಆಸ್ಪತ್ರೆಗಳಲ್ಲಿ ಸರಕಾರದ ವತಿಯಿಂದಲೇ ಸಿಟಿ ಮತ್ತು ಎಂಆರ್ ಐ ಸ್ಕ್ಯಾನ್ ವ್ಯವಸ್ಥೆಗೆ ಸೂಚಿಸಲಾಗಿದೆ, ಈಗಾಗಲೇ ವೆನಾಕ್‌ನಲ್ಲಿ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನ್ ಸಂಬಂಧ ಖಾಸಗಿ ಸಂಸ್ಥೆ ಜತೆ ಒಡಂಬಡಿಕೆಯಾಗಿದೆ' ಎಂದರು.
ವೆನ್ಸಾಕ್ ಆಸ್ಪತ್ರೆ ಯಲ್ಲಿ ನೂತನವಾಗಿ ಸಿದ್ಧಗೊಂಡಿರುವ ಕ್ಯಾಥ್‌ಲ್ಯಾಬ್ ಶೀಘ್ರ ಕಾರ್ಯಾರಂಭಿಸಲಿದ್ದು, ಬಿಪಿಎಲ್ ಪಡಿತರ ಚೀಟಿದಾರರಿಗೆ ಅಂಜಿ ಯೋಪ್ಲಾಸ್ಟಿ ಮೂಲಕ ಸ್ಟಂಟ್ ಅಳವಡಿಕೆ ಸೇರಿದಂತೆ ಹೃದ್ರೋಗ ಶಸ್ತ್ರಚಿಕಿತ್ಸೆಗಳು ಉಚಿತವಾಗಿರಲಿದೆ. ಆದರೆ ಆಂಜಿಯೋಗ್ರಾಂಗೆ ನಿಯಮಗಳ ಪ್ರಕಾರ ಬಿಪಿಎಲ್‌ದಾರರಿಗೆ 5,000 ರೂ. ಕನಿಷ್ಠ ದರ ನಿಗದಿ ಪಡಿಸಲಾಗಿದೆ. ಆದರೆ ಉಚಿತವಾಗಿ ಮಾಡುವ ನಿಟ್ಟಿನಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.
PublicNext
02/08/2025 01:04 pm