", "articleSection": "Politics,Law and Order", "image": { "@type": "ImageObject", "url": "https://prod.cdn.publicnext.com/s3fs-public/52563-1754121072-image-(63).png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಕೆಆರ್‌ ನಗರದ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿ...Read more" } ", "keywords": ""Prajwal Revanna rape case, lawyer withdrawal, sexual harassment allegations, Hassan CD case, JD(S) MP controversy, court proceedings, legal updates, Karnataka news", "url": "https://dashboard.publicnext.com/node" } ಪ್ರಜ್ವಲ್‌ ರೇವಣ್ಣನಿಗೆ ಮತ್ತೊಂದು ಶಾಕ್‌ : 2 ಅತ್ಯಾಚಾರ ಪ್ರಕರಣಗಳಿಂದ ಹಿಂದೆ ಸರಿದ ಅರುಣ್ ಕುಮಾರ್!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಜ್ವಲ್‌ ರೇವಣ್ಣನಿಗೆ ಮತ್ತೊಂದು ಶಾಕ್‌ : 2 ಅತ್ಯಾಚಾರ ಪ್ರಕರಣಗಳಿಂದ ಹಿಂದೆ ಸರಿದ ಅರುಣ್ ಕುಮಾರ್!

ಬೆಂಗಳೂರು : ಕೆಆರ್‌ ನಗರದ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ಇಂದು ಮಧ್ಯಾಹ್ನ 2.45ಕ್ಕೆ ಕೋರ್ಟ್‌ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ. ಇದರ ನಡುವೆ ಮತ್ತೊಂದು ಬೆಳವಣಿಗೆ ನಡೆದಿರುವುದು ಬೆಳಕಿಗೆ ಬಂದಿದೆ.

ಶಿಕ್ಷೆ ಪ್ರಮಾಣ ಪ್ರಕಟಕ್ಕೂ ಮುನ್ನ 2 ಅತ್ಯಾಚಾರ ಪ್ರಕರಣದ ವಾದದಿಂದ ಪ್ರಜ್ವಲ್ ರೇವಣ್ಣ ಅವರ ವಕೀಲ ಅರುಣ್ ಕುಮಾರ್ ಹಿಂದೆ ಸರಿದಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ಮೊದಲಿಗೆ ಪ್ರಾಸಿಕ್ಯೂಷನ್ ಪರ ವಾದಿಸಲು ಕೋರ್ಟ್ ಸೂಚನೆ ನೀಡಿತು ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ ಬಿ.ಎನ್ ಜಗದೀಶ್ ವಾದ ಆರಂಭ ಮಾಡಿದರು. ಗರಿಷ್ಠ ಶಿಕ್ಷ ಕನಿಷ್ಠ ಶಿಕ್ಷೆ ಎಷ್ಟು ಎಂದು ಸ್ಪಷ್ಟವಾಗಿದೆ ಕೇವಲ ಅತ್ಯಾಚಾರ ಆಗಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿತ್ತು. ಆದರೆ ಇಲ್ಲಿ ಪದೇ ಪದೇ ಅತ್ಯಾಚಾರವಾಗಿದೆ.

ಕನಿಷ್ಠ 10 ವರ್ಷ ಗರಿಷ್ಠ ಜೀವನ ಪರ್ಯಂತ ಸೆರೆವಾಸದ ಅವಕಾಶ ಇದೆ, ಮಹಿಳೆ ಶಿಕ್ಷಿತಳಲ್ಲ, ಬಡ ಕೂಲಿ ಕೆಲಸದ ಮಹಿಳೆ ಆಕೆಯ ಮೇಲೆ ಅಧಿಕಾರಯುತ ಸ್ಥಿತಿಯಲ್ಲಿ ಅತ್ಯಾಚಾರ ನಡೆಸಿರುವಂತಹ ಅಪರಾಧ ಸಾಬೀತಾಗಿದೆ. ದುರಾದೃಷ್ಟವಶಾತ್ ಆಕೆಗೆ ಯಾವುದೇ ಸ್ಥಾನಮಾನವಿಲ್ಲ ವಿಡಿಯೋ ನೋಡಿದರೆ ಕೃತ್ಯದ ತೀವ್ರತೆ ಸ್ಪಷ್ಟವಾಗಿದೆ 10 ಸಾವಿರ ಸಂಬಳಕ್ಕೆ ಇವರು ಕೆಲಸ ಮಾಡುತ್ತಿದ್ದರು ಎಂದು ಬಿಎನ್ ಜಗದೀಶ್ ವಾದಿಸಿದರು.

Edited By : Nirmala Aralikatti
PublicNext

PublicNext

02/08/2025 01:22 pm

Cinque Terre

26.13 K

Cinque Terre

4

ಸಂಬಂಧಿತ ಸುದ್ದಿ