", "articleSection": "Politics,Law and Order", "image": { "@type": "ImageObject", "url": "https://prod.cdn.publicnext.com/s3fs-public/52563-1754126630-WhatsApp-Image-2025-08-02-at-2.45.28-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಂಬೈ : 2008ರ ಸೆ.29ರಂದು ಮಾಲೆಗಾಂವ್ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹದಿನೇಳು ವರ್ಷಗಳ ನಂತರ, ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ 7 ಆ...Read more" } ", "keywords": ""Mohan Bhagwat arrest plot, RSS chief life threat, ATS officer information, conspiracy against Mohan Bhagwat, RSS news updates, Mohan Bhagwat latest news"", "url": "https://dashboard.publicnext.com/node" } RSS ಮುಖ್ಯಸ್ಥ ಮೋಹನ್‌ ಭಾಗವತ್‌ ಬಂಧನಕ್ಕೆ ಸಂಚು ನಡೆದಿತ್ತು : ಎಟಿಎಸ್ ಅಧಿಕಾರಿ ಮಾಹಿತಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

RSS ಮುಖ್ಯಸ್ಥ ಮೋಹನ್‌ ಭಾಗವತ್‌ ಬಂಧನಕ್ಕೆ ಸಂಚು ನಡೆದಿತ್ತು : ಎಟಿಎಸ್ ಅಧಿಕಾರಿ ಮಾಹಿತಿ

ಮುಂಬೈ : 2008ರ ಸೆ.29ರಂದು ಮಾಲೆಗಾಂವ್ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹದಿನೇಳು ವರ್ಷಗಳ ನಂತರ, ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ 7 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಆ ಮೂಲಕ, ಕೇಸರಿ ಭಯೋತ್ಪಾದನೆ ವಿಚಾರಕ್ಕೆ ಸಂಬಂಧಿಸಿದಂತೆ, ಮಹತ್ವದ ತೀರ್ಪನ್ನು ನೀಡಿದೆ. ತನಿಖೆಯ ವೇಳೆ ಎಟಿಸ್ ತಂಡದಲ್ಲಿದ್ದ ಮಾಜಿ ಅಧಿಕಾರಿಯೊಬ್ಬರು ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.

ಹೌದು ಮಾಲೆಗಾಂವ್ ಸ್ಫೋಟ ಪ್ರಕರಣದ ತನಿಖೆಯೇ ಒಂದು ಕಟ್ಟುಕಥೆ. ನಕಲಿ ತನಿಖಾಧಿಕಾರಿಗೆ ಅದರ ನೇತೃತ್ವ ವಹಿಸಿ ʼಕೇಸರಿ ಭಯೋತ್ಪಾದನೆʼ ಎಂಬುದಾಗಿ ಬಿಂಬಿಸುವ ಹುನ್ನಾರ ನಡೆದಿತ್ತುʼ ಎಂದು ಮಾಜಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿ ನಿವೃತ್ತ ಇನ್ಸ್‌ಪೆಕ್ಟರ್ ಮೆಹಿಬೂಬ್ ಮುಜಾವರ್ ಅಸಲಿ ಸತ್ಯ ಹೇಳಿದ್ದಾರೆ.

ಗುರುವಾರ (ಜುಲೈ 31) ಸೋಲಾಪುರದಲ್ಲಿ ʼಮಾಲೆಗಾಂವ್ ಸ್ಫೋಟ ಪ್ರಕರಣದ ತನಿಖೆʼ ಬಗೆಗಿನ ವಾಸ್ತವ ಸಂಗತಿಯನ್ನು ಬಿಚ್ಚಿಟ್ಟ ಅವರು, ಈ ಪ್ರಕರಣದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸಿಲುಕಿಸಿ ಬಂಧಿಸಲೂ ನನಗೆ ಸೂಚನೆ ನೀಡಲಾಗಿತ್ತು ಎನ್ನುವ ಸ್ಫೋಟಕ ಸತ್ಯ ಬಹಿರಂಗಗೊಳಿಸಿದ್ದಾರೆ.

ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಏಳು ಆರೋಪಿಗಳನ್ನು ಎನ್ ಐಎ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಘಟನೆ ಹಿಂದೆ ಕೇಸರಿ ಭಯೋತ್ಪಾದನೆ ಇತ್ತು ಎಂಬುದನ್ನು ಸಾಬೀತುಪಡಿಸುವ ಉದ್ದೇಶವಿತ್ತು. ಸುಳ್ಳು ಕಥೆಗಳನ್ನು ಎಟಿಎಸ್ ಹೆಣೆದಿದೆ ಎಂದು ನ್ಯಾಯಾಲಯ ಹೇಳಿದೆ ಎಂದಿದ್ದಾರೆ.

ಆರಂಭದಲ್ಲಿ ಎಟಿಎಸ್ ಪ್ರಕರಣದ ತನಿಖೆ ನಡೆಸುತ್ತಿತ್ತು. ಬಳಿಕ ಎನ್ ಐಎ ತನಿಖೆ ಆರಂಭಿಸಿತು. ನಕಲಿ ತನಿಖೆಯನ್ನು ನಕಲಿ ಅಧಿಕಾರಿಗಳೊಬ್ಬರು ನಡೆಸಿದ್ದಾರೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ನಾನೂ ಕೂಡ ಈ ಪ್ರಕರಣದ ತನಿಖಾ ತಂಡದಲ್ಲಿ ಇದ್ದೆ. ಹೋಗಿ ಮೋಹನ್ ಭಾಗವತ್ ಅವರನ್ನು ಬಂಧಿಸಿ ಕರೆತನ್ನಿ ಎಂದು ಮೇಲಿನಿಂದ ಆದೇಶ ಬಂತು. ಎಟಿಎಸ್ ಯಾವ ರೀತಿ ತನಿಖೆ ನಡೆಸಿತು. ಹಾಗೂ ಯಾಕೆ ಎಂಬುದನ್ನು ನಾನು ಹೇಳಲಾರೆ. ಆದರೆ ರಾಮ್ ಕಾಲಸಂಗ್ರ, ಸಂದೀಪ್ ದಾಂಗೆ, ದಿಲೀಪ್ ಪಾಟೀದಾರ್ ಹಾಗೂ ಮೋಹನ್ ಭಾಗವತ್ ಅವರನ್ನು ಬಂಧಿಸಲು ಆದೇಶಿಸಲಾಗಿತ್ತು. ಇವು ಪಾಲಿಸಲು ಸಾಧ್ಯವಿಲ್ಲದ ಆದೇಶವಾಗಿತ್ತು. ಭಾಗವತ್ ಅವರನ್ನು ಬಂಧಿಸಿ ಕರೆತರುವುದು ನನ್ನ ಸಾಮರ್ಥ್ಯಕ್ಕೂ ಮೀರಿದ್ದಾಗಿತ್ತು. ನಾನು ಆ ಆದೇಶವನ್ನು ಪಾಲಿಸಲಿಲ್ಲ ಎಂದಿದ್ದಾರೆ.

ಇದೇ ಕಾರಣಕ್ಕೆ ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಾಯಿತು. ನನ್ನ 40 ವರ್ಷದ ವೃತ್ತಿ ಬದುಕನ್ನೇ ನಾಶಮಾಡಿದರು. ಹಿಂದೂ ಭಯೋತ್ಪಾದನೆ ಎಂಬುದು ಇರಲೇ ಇಲ್ಲ, ಅದೆಲ್ಲವೂ ಸುಳ್ಳು ಎಂದು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

02/08/2025 02:54 pm

Cinque Terre

40.13 K

Cinque Terre

6

ಸಂಬಂಧಿತ ಸುದ್ದಿ