ಬೆಂಗಳೂರು : ಮೈಸೂರು ಜಿಲ್ಲೆಯ ಕೆಆರ್ ನಗರದ ಮಹಿಳೆಯ ಮೇಲಿನ ಅತ್ಯಾಚಾರ ಕೇಸ್ ಸಂಬಂಧ ದೋಷಿ ಪ್ರಜ್ವಲ್ ರೇವಣ್ಣಗೆ ಇದೀಗ ಶಿಕ್ಷೆ ಪ್ರಮಾಣ ಪ್ರಕಟವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ, ಜೀವನ ಪರ್ಯಂತ ಸೆರೆವಾಸ, ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ 10 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಗೆ 7 ಲಕ್ಷ ಪರಿಹಾರ ನೀಡಲು ಸೂಚಿಸಿದ್ದಾರೆ. ಈ ಶಿಕ್ಷೆ ಇಂದಿನಿಂದ ಆರಂಭವಾಗಲಿದೆ.
ಶಿಕ್ಷೆ ಪ್ರಮಾಣ ಕುರಿತು ಸರ್ಕಾರಿ ಪರ ವಕೀಲರಾಗಿ ಎನ್. ಜಗದೀಶ್, ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ನಳಿನಿ ಮಾಯಾಗೌಡ ಅವರು ವಾದ ಪ್ರತಿವಾದ ಮಂಡಿಸಿದರು. ವಾದ ಪ್ರತಿವಾದದ ಬಳಿಕ ನ್ಯಾ. ಗಜಾನನ ಭಟ್ ಅವರ ಪೀಠ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ.
ಐಪಿಸಿ ಸೆಕ್ಷನ್ 376 (2) (k) ಅಡಿಯಲ್ಲಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಅಲ್ಲದೇ 5 ಲಕ್ಷ ರೂ. ದಂಡವನ್ನೂ ನ್ಯಾಯಾಲಯ ವಿಧಿಸಿದೆ. ಸಂತ್ರಸ್ತೆಗೂ 7 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ. ಪ್ರಜ್ವಲ್ ರೇವಣ್ಣಗೆ ಗರಿಷ್ಠ ಶಿಕ್ಷೆಯನ್ನು ಪ್ರಕಟಿಸಲಾಗಿದೆ.
ದೋಷಿ ಎಂದು ತೀರ್ಪು ಹೊರಬೀಳುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್, ಹಾಸನ ಜಿಲ್ಲೆಗೆ ಸಾಕಷ್ಟು ಮಾಡಿದ್ದೇನೆ, ಚುನಾವಣೆಗೆ 6 ದಿನ ಮುಂಚಿತವಾಗಿ ಈ ವಿಡಿಯೋ ರಿಲೀಸ್ ಮಾಡಿದ್ದಾರೆ. ನಾನು ಮಹಿಳೆಯ ಅತ್ಯಾಚಾರ ಮಾಡಿದ್ರೆ ಆಕೆಯ ಸಹೋದರಿ ನಮ್ಮ ಮನೇಲಿ ಕೆಲಸ ಮಾಡ್ತಾ ಇದ್ರಾ? ಅಂತ ಕಣ್ಣೀರಿಟ್ಟಿದ್ದಾರೆ.
PublicNext
02/08/2025 04:35 pm