ಬೆಂಗಳೂರು : ಮೈಸೂರಿನ ಕೆ.ಆರ್ .ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಅಪಹರಣ ಮಾಡಿದ ಆರೋಪದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಜೀವಾವಧಿ ಶಿಕ್ಷೆ ನೀಡಿ ತನ್ನ ಆದೇಶವನ್ನು ಪ್ರಕಟಿಸಿದೆ.
ಇನ್ನೂ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ರೇವಣ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟಿಸುತ್ತಿದ್ದಂತೆ ಮಾಜಿ ಸಂಸದ ಕೋರ್ಟ್ ಹಾಲ್ ನಲ್ಲೇ ಕಣ್ಣೀರಿಟ್ಟಾರೆ.
ಅಂದಿನಿಂದ ಇಂದಿನವರೆಗೆ ಏನೇನಾಯ್ತು..?
ಏಪ್ರಿಲ್ 2024: ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಲೈಂಗಿಕ ವಿಡಿಯೊಗಳಿರುವ ಪೆನ್ ಡ್ರೈವ್ ಹಾಸನದ ತುಂಬೆಲ್ಲಾ ಹರಿದಾಡಿತು
20ನೇ ಏಪ್ರಿಲ್ 2024: ಚುನಾವಣೆ ಸಂದರ್ಭದಲ್ಲೇ ಪ್ರಜ್ವಲ್ ಅವರ ವರ್ಚಸ್ಸಿಗೆ ಧಕ್ಕೆಯನ್ನುಂಟು ಮಾಡಲು ಪೆನ್ ಡ್ರೈವ್ ಹಂಚಲಾಗುತ್ತಿದೆ ಎಂದು ಆರೋಪಿಸಿ ಚುನಾವಣಾ ಏಜೆಂಟ್ ಒಬ್ಬರು ಎಫ್‌ಐಆರ್ ದಾಖಲಿಸಿದ್ದರು.
26ನೇ ಏಪ್ರಿಲ್ 2024: ಲೋಕಸಭಾ ಚುಣಾವಣೆ ಪೂರ್ಣಗೊಂಡ ಬಳಿಕ, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಜ್ವಲ್ ವಿದೇಶ ಪ್ರಯಾಣ
27ನೇ ಏಪ್ರಿಲ್ 2024: ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಿದ ರಾಜ್ಯ ಸರ್ಕಾರ
30ನೇ ಏಪ್ರಿಲ್ 2024: ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ ಜೆಡಿಎಸ್
2ನೇ ಮೇ 2024: ಪ್ರಜ್ವಲ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ದೂರು ದಾಖಲು. ರೇವಣ್ಣ ಹೆಸರು ಉಲ್ಲೇಖ.
3ನೇ ಮೇ 2024: ಅಪಹರಣಕ್ಕೊಳಗಾಗಿದ್ದ ದೂರರಾರರನ್ನು ಮೈಸೂರು ಬಳಿಯ ಫಾರ್ಮ್‌ಹೌಸ್ ಬಳಿ ರಕ್ಷಣೆ
4ನೇ ಮೇ 2024: ಅಪಹರಣ ಪ್ರಕರಣದಲ್ಲಿ ರೇವಣ್ಣ ಬಂಧನ
7ನೇ ಮೇ 2024: ಎಸ್‌ಐಟಿ ಎದುರು ಹಾಜರಾಗುವಂತೆ ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ
31ನೇ ಮೇ 2024: ಭಾರತಕ್ಕೆ ಬಂದ ಪ್ರಜ್ವಲ್, ಮಹಿಳಾ ಅಧಿಕಾರಿಗಳನ್ನೇ ಒಳಗೊಂಡ ಎಸ್‌ಐಟಿ ತಂಡದಿಂದ ಬಂಧನ
8ನೇ ಸೆಪ್ಟೆಂಬರ್ 2024: ಪ್ರಜ್ವಲ್ ವಿರುದ್ಧ ದೋಷಾರೋಪ ಸಲ್ಲಿಸಿದ ಎಸ್‌ಐಟಿ
2ನೇ ಮೇ 2025: ವಿಚಾರಣೆ ಆರಂಭಿಸಿದ ನ್ಯಾಯಾಲಯ
18ನೇ ಜುಲೈ 2025: ವಿಚಾರಣೆ ಪೂರ್ಣ
1ನೇ ಆಗಸ್ಟ್ 2025: ಪ್ರಜ್ವಲ್ ದೋಷಿ ಎಂದು ಸಾಬೀತು
2ನೇಆಗಸ್ಟ್ 2025 : ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್
PublicNext
02/08/2025 05:08 pm