", "articleSection": "Politics,Law and Order", "image": { "@type": "ImageObject", "url": "https://prod.cdn.publicnext.com/s3fs-public/387839-1754134742-Untitled-design---2025-08-02T171231.370.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 376(2)(n...Read more" } ", "keywords": "HD Deve Gowda, Prajwal Revanna, sexual assault case, life imprisonment, emotional breakdown, JD(S) patriarch, family controversy, SIT investigation. ", "url": "https://dashboard.publicnext.com/node" } ಮೊಮ್ಮಗ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ : ತೀರ್ಪಿನ ವೇಳೆ ಟಿವಿ ಮುಂದೆ ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇಗೌಡ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಮ್ಮಗ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ : ತೀರ್ಪಿನ ವೇಳೆ ಟಿವಿ ಮುಂದೆ ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 376(2)(n) ಸೆಕ್ಷನ್‌ನಲ್ಲಿ ಜೀವಾವಧಿ ಶಿಕ್ಷೆ ನೀಡಲಾಗಿದ್ದರೆ, 354(b) ಸೆಕ್ಷನ್‌ ಅಡಿಯಲ್ಲಿ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಒಂದೆಡೆ ಪ್ರಜ್ವಲ್‌ ರೇವಣ್ಣಗೆ ನ್ಯಾಯಾಧೀಶರು ಶಿಕ್ಷೆಯ ಪ್ರಮಾಣ ಓದಿ ತಿಳಿಸುತ್ತಿದ್ದರೆ, ಇನ್ನೊಂದೆಡೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮಧ್ಯಾಹ್ನದಿಂದಲೇ ಟಿವಿಯ ಎದುರು ಕಣ್ಣಿಟ್ಟು ಕುಳಿತಿದ್ದರು.

ಗುರುವಾರ ಕೋರ್ಟ್‌ ಪ್ರಜ್ವಲ್‌ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತಿಳಿಸಿತ್ತು. ಶನಿವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಲಾಗಿದೆ. ಕೋರ್ಟ್‌ನಲ್ಲಿ ಶಿಕ್ಷೆಯ ಪ್ರಮಾಣ ಪ್ರಕಟ ಆಗುತ್ತಿರುವಂತೆಯೇ ಮಾಜಿ ಪ್ರಧಾನಿ ಕಣ್ಣೀರು ಹಾಕಿದ್ದಾರೆ.

ಮಧ್ಯಾಹ್ನದಿಂದ ಮಾಜಿ ಪ್ರಧಾನಿ ಟಿವಿ ನೋಡುತ್ತಲೇ ಕುಳಿತಿದ್ದರು. ಶಿಕ್ಷೆ ಪ್ರಕಟ ಆಗುತ್ತಿರುವಂತೆಯೇ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಗಳಗಳನೆ ಕಣ್ಣೀರಿಟ್ಟಿದ್ದಾರೆ.

Edited By : Abhishek Kamoji
PublicNext

PublicNext

02/08/2025 05:09 pm

Cinque Terre

39.57 K

Cinque Terre

3

ಸಂಬಂಧಿತ ಸುದ್ದಿ