", "articleSection": "Politics,Government,News", "image": { "@type": "ImageObject", "url": "https://prod.cdn.publicnext.com/s3fs-public/421698-1754141966-21~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಮತಗಳ್ಳತನವಾಗಿದೆ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ಪ್ರತಿಭಟನೆ ಹಮ್ಮಿಕೊಳ್...Read more" } ", "keywords": "ಬೆಂಗಳೂರು : ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ , Bengaluru political counter-protest, Congress protest response Bengaluru, BJP counter protest Karnataka, political rivalry Bengaluru, Congress agitation against government", "url": "https://dashboard.publicnext.com/node" }
ಬೆಂಗಳೂರು : ಮತಗಳ್ಳತನವಾಗಿದೆ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಸಹ ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಈ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ರಾಹುಲ್ ಗಾಂಧಿ ಮತಗಳ್ಳತನ ಆಗಿದೆ ಎಂದು ದೇಶ ಮತ್ತು ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ. ಅವರ ಹೇಳಿಕೆ ಮತ್ತು ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಆ. 5ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುವುದು, ಪ್ರತಿಭಟನೆಯ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ನೀಡಲಿದ್ದೇವೆ ಎಂದು ತಿಳಿಸಿದರು.ರಾಹುಲ್ ಗಾಂಧಿಯವರು ಇದೇ 5ರಂದು ಬೆಂಗಳೂರಿನಲ್ಲಿ ನಾಟಕ ಮಾಡಲು ಹೊರಟಿದ್ದಾರೆ ಅಲ್ದೇ ರಾಹುಲ್ ಗಾಂಧಿಯವರು ಬರುತ್ತಾರೆಂಬ ಕಾರಣಕ್ಕೆ ರಾಜ್ಯ ಸರಕಾರವು ನಿನ್ನೆ ಫ್ರೀಡಂ ಪಾರ್ಕಿನಲ್ಲಿ ಕಾಂಪೌಂಡನ್ನು ಒಡೆದು ಹಾಕಿ ಅಲ್ಲಿದ್ದ ಮರವನ್ನೂ ಕಡಿದು ಹಾಕಿಸಿದೆ. ರಾಹುಲ್ ಗಾಂಧಿ, ಮುಖ್ಯಮಂತ್ರಿಗಳು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಇದೆ ವೇಳೆ ಒತ್ತಾಯಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯವೂ ಒಳಗೊಂಡಂತೆ ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆಗಳಲ್ಲಿ ಅಕ್ರಮ ನಡೆದಿದೆ, ಬಿಜೆಪಿ ಚುನಾವಣಾ ಆಯೋಗದ ದುರ್ಬಳಕೆಯನ್ನು ಮಾಡಿಕೊಂಡಿದೆ ಎಂಬ ಆರೋಪವನ್ನು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಕಾಂಗ್ರೆಸ್ಸಿನ ಮಾರ್ಗದರ್ಶನವಿಲ್ಲದ ಕ್ಷಿಪಣಿಯಂತಿರುವ ಸುಪ್ರೀಂ ನಾಯಕ ಆದ ರಾಹುಲ್ ಗಾಂಧಿ ಮಾಡುತ್ತಿದ್ದಾರೆ ಎಂದು ಟೀಕಿಸಿದರು.ರಾಹುಲ್ ಗಾಂಧಿ ಅವರು ಗೊಂದಲದಲ್ಲಿದ್ದಾರೆ. ಸೋಲಿನ ಅವಮಾನ ಮತ್ತು ಹತಾಶರಾಗಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ. ಈ ದೇಶದ ಜನರ ವಿಶ್ವಾಸವನ್ನು ಪಡೆದುಕೊಳ್ಳುವಲ್ಲಿ ವಿಫಲರಾದ ರಾಹುಲ್ ಗಾಂಧಿಯವರು ಒಂದು ಕಪಟ ನಾಟಕವನ್ನು ಪ್ರಾರಂಭ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
PublicNext
02/08/2025 07:09 pm