ದೆಹಲಿ : ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿರುವ ಬಗ್ಗೆ ನಾವು ಮಾತನಾಡಿದರೆ ರಾಜಕೀಯವಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುವುದು ಬಹುಮುಖ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಮಾತನಾಡಿದ ಅವರು, ಈ ತೀರ್ಪಿನ ಬಗ್ಗೆ ನನ್ನ ಪ್ರತಿಕ್ರಿಯೆ ಕೇಳುವುದಕ್ಕಿಂತ ಅವರದೇ ಪಕ್ಷ ಜೆಡಿಎಸ್ ಹಾಗೂ ಅವರ ಮೈತ್ರಿ ಪಕ್ಷ ಬಿಜೆಪಿ ನಾಯಕರನ್ನು ಕೇಳಬೇಕು. ಏನು ಸರಿ, ಏನು ಸರಿಯಿಲ್ಲ ಅಂತಾ ಅವರು ಹೇಳಬೇಕು. ಅವರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡುವ ಶಕ್ತಿ, ಸಾಮರ್ಥ್ಯ ಇದೆ.
ಜೆಡಿಎಸ್ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರು, ಯುವ ಘಟಕದ ಅಧ್ಯಕ್ಷರು ಪ್ರತಿಕ್ರಿಯೆ ನೀಡಲಿ. ನಾವು ಕಾನೂನಿಗೆ ಗೌರವ ಕೊಟ್ಟು, ಅದು ಹೇಳಿದಂತೆ ಕೇಳಿಕೊಂಡು ಬರುತ್ತೇವೆ. ಅಶೋಕ್, ನಾರಾಯಣಸ್ವಾಮಿ, ಸಿ.ಟಿ. ರವಿ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರು ಯಾಕೆ ಈ ತೀರ್ಪು ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
PublicNext
02/08/2025 10:01 pm