ಬೆಂಗಳೂರು : ಪರಿಶಿಷ್ಟ ವರ್ಗದಲ್ಲಿ ಒಳಮೀಸಲಾತಿ ಜಾರಿ ಕುರಿತಂತೆ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಸದಾಶಿವನಗರದ ಕಚೇರಿಯಲ್ಲಿ ಸಚಿವರು, ಶಾಸಕರಗಳೊಂದಿಗೆ ಸಭೆ ನಡೆಯಿತು. ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಎಲ್ಲರೂ ಒಟ್ಟಾಗಿ ಇರಲು ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಮಾತನಾಡಿ,
ರಾಜ್ಯದಲ್ಲಿ ಹಲವು ವರ್ಷಗಳಿಂದ ಒಳ ಮೀಸಲಾತಿ ಬಗ್ಗೆ ಚರ್ಚೆಯಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಜಸ್ಟಿಸ್ ನಾಗಮೋಹನ್ ದಾಸ್ ಅವರ ಆಯೋಗ ನೇಮಿಸಲಾಗಿದೆ. ಅಂಕಿ-ಅಂಶಗಳನ್ನು ಸಂಗ್ರಹಣೆ ಮಾಡಿ. ಅದರ ಆಧಾರದ ಮೇಲೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದೆ ಉಳಿದಿರುವ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿ ತರಬೇಕು ಎಂಬ ಉದ್ದೇಶದಿಂದ ರಚಿಸಲಾದ ನಾಗಮೋಹನ್ ದಾಸ್ ಅವರ ಆಯೋಗ ಸದ್ಯದಲ್ಲೇ ವರದಿ ಕೊಡುತ್ತಾರೆ ಎಂಬ ಮಾಹಿತಿ ಇದೆ. ವರದಿ ಕೊಡುವ ಸಂದರ್ಭದಲ್ಲಿ ಪರಿಶಿಷ್ಟ ವರ್ಗದಲ್ಲಿರುವ ವಿವಿಧ ಸಮುದಾಯಗಳು ಒಟ್ಟಾಗಿ ಹೋಗಬೇಕು. ಯಾವುದದೇ ಸಂಘರ್ಷ ಆಗಬಾರದು. ಏನೇ ವ್ಯತ್ಯಾಸಗಳು ಬಂದರು ಅದನ್ನ ಸರಿದೂಗಿಸಿಕೊಂಡು ಹೋಗುವ ತೀರ್ಮಾನಕ್ಕೆ ಬರಬೇಕು. ಇಲ್ಲವಾದರೆ, ಒಳಮೀಸಲಾತಿ ಜಾರಿ ಮತ್ತೇ ಮುಂದೆ ಹೋಗುತ್ತದೆ, ಆ ರೀತಿ ಆಗಬಾರದು ಎಂಬ ಉದ್ದೇಶಕ್ಕಾಗಿ ಇಂದು ನಾವೆಲ್ಲ ಸಭೆ ನಡೆಸಿ, ಒಟ್ಟಾಗಿ ಚರ್ಚೆ ಮಾಡಿದ್ದೇವೆ. ಏನೇ ವರದಿಯಲ್ಲಿ ಬರಲಿ, ಅದನ್ನು ನಾವೆಲ್ಲ ಒಟ್ಟಾಗಿ ಚರ್ಚೆ ಮಾಡಿಕೊಂಡು ಹೋಗಬೇಕು ಎಂಬ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
ಒಳ ಮೀಸಲಾತಿ ಕುರಿತು ಎಲ್ಲರೂ ಸಹಮತವನ್ನು ವ್ಯಕ್ತ ಮಾಡಿದ್ದಾರೆ. ಸಚಿವರು, ಶಾಸಕರುಗಳಿಲ್ಲದ ಸಮುದಾಯಗಳಿಗೂ ನ್ಯಾಯ ಒದಗಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಚರ್ಚೆ ಮಾಡಿದ್ದೇವೆ. ಸಣ್ಣ ಸಮುದಾಯಗಳಲ್ಲಿ ಯಾರು ಶಾಸಕರುಗಳಿಲ್ಲ. ಸಚಿವರುಗಳಿಲ್ಲ. ಅವರಿಗೂ ನ್ಯಾಯ ಸಿಗಬೇಕಲ್ಲವೇ? ಅದನ್ನು ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿದ್ದೇವೆ. ಈ ವಿಚಾರದಲ್ಲಿ ಗೊಂದಲ ಮಾಡಿಕೊಳ್ಳಬಾರದು. ಇಲ್ಲವಾದರೆ ಮತ್ತೆ ಮುಂದಕ್ಕೆ ಹೋಗುತ್ತದೆ. ಅದು ಹೋಗಬಾರದು. ಎಲ್ಲವನ್ನು ಅನುಸರಿಸಿಕೊಂಡು ಹೋಗಬೇಕು ಎಂಬುದನ್ನು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
PublicNext
02/08/2025 10:55 pm