", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/454738-1756125398-New-(1280-x-720-px)-(1280-x-720-px)-(1280-x-720-px)-(1).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RuderegowdaGadag" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ: ಇಂದಿನ ಆಧುನಿಕ ಸಮಾಜದಲ್ಲಿ ಪತಿ ಹಾಗೂ ಪತ್ನಿ ಒಬ್ಬರಿಗೊಬ್ಬರು ಅರಿತು ನಡೆದರೆ ಅವರ ಬಾಳು ಬಂಗಾರವಾಗುತ್ತದೆ ಎಂದು ವೀರೇಶ್ವರ ಪುಣ್ಯಾಶ್ರಮದ ...Read more" } ", "keywords": "Gadag couple relationship advice, Gadag Kallayyajjanavaru speech, husband wife understanding life, Gadag spiritual discourse, Karnataka family values", "url": "https://dashboard.publicnext.com/node" }
ಗದಗ: ಇಂದಿನ ಆಧುನಿಕ ಸಮಾಜದಲ್ಲಿ ಪತಿ ಹಾಗೂ ಪತ್ನಿ ಒಬ್ಬರಿಗೊಬ್ಬರು ಅರಿತು ನಡೆದರೆ ಅವರ ಬಾಳು ಬಂಗಾರವಾಗುತ್ತದೆ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ಹೇಳಿದರು.
ತಾಲೂಕಿನ ನಾಗಾವಿ ಗ್ರಾಮದಲ್ಲಿ ಶರಣಬಸವೇಶ್ವರ ಪುರಾಣ ಕಾರ್ಯಕ್ರಮ ಮಂಗಲೋತ್ಸವದಲ್ಲಿ ಜರುಗಿದ ಸರ್ವಧರ್ಮಗಳ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು
.
ವೀರೇಶ್ವರ ಪುಣ್ಯಾಶ್ರಮದ ಹಿಂದಿನ ಗುರುಗಳಾದ ಪಂ.ಪುಟ್ಟರಾಜ ಕವಿ ಗವಾಯಿಗಳವರ ಕಾಲದಿಂದಲೂ ನಾಗಾವಿ ಗ್ರಾಮವನ್ನು ತಮ್ಮ ತವರುಮನೆ ಎಂದೇ ಭಾವಿಸಿ ಪ್ರತಿವರ್ಷ ಗ್ರಾಮದ ಜನತೆಗೆ ದರ್ಶನಾಶೀರ್ವಾದವನ್ನು ನೀಡುತ್ತಿದ್ದರು. ಅದೇ ಪರಂಪರೆಯನ್ನು ಮುಂದುವರೆಸಿಕೊAಡು ತಮ್ಮನ್ನು ನಾಗಾವಿ ಗ್ರಾಮಕ್ಕೆ ಆಹ್ವಾನಿಸುತ್ತಿರುವುದು ಸಂತಸದ ವಿಷಯ. ಮುಸ್ಲೀಂ ಸಮಾಜದ ಪೀರಸಾಬ ದಾವಲಸಾಬ ಪೀರಖಾನವರ ಅವರು ತಮಗೆ ತುಲಾಭಾರ ನೆರವೇರಿಸುವ ಮೂಲಕ ಭಾವೈಕ್ಯತೆಗೆ ಶ್ರೀಕಾರ ಹಾಕಿದ್ದಾರೆ ಎಂದು ಕಲ್ಲಯ್ಯಜ್ಜನವರು ಹೇಳಿದರು.
ಸರ್ವಧರ್ಮದ ನವ ವಧು-ವರರಿಗೆ ಕಲ್ಲಯ್ಯಜ್ಜನವರು ಸೇರಿದಂತೆ ಗ್ರಾಮದ ಗುರುಹಿರಿಯರು, ಗಣ್ಯರು ಶುಭ ಹಾರೈಸಿದರು.
PublicNext
25/08/2025 06:07 pm