", "articleSection": "Crime,Government,News", "image": { "@type": "ImageObject", "url": "https://prod.cdn.publicnext.com/s3fs-public/421698-1756203896-015~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RevannaT.Narasipur" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೈಸೂರು: ಟಿ. ನರಸೀಪುರ ತಾಲೂಕಿನ ತಲಕಾಡು ಹೋಬಳಿಯ ಅಕ್ಕೂರು ಗ್ರಾಮದಲ್ಲಿ ಅಕ್ರಮ ಮಣ್ಣು ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಈ ಬಗ್ಗೆ ಕಂದಾಯ...Read more" } ", "keywords": "Akkur village,illegal soil transport,illegal sand mining,officials,no action,villagers protest,public outrage,Karnataka,local news,soil smuggling", "url": "https://dashboard.publicnext.com/node" }
ಮೈಸೂರು: ಟಿ. ನರಸೀಪುರ ತಾಲೂಕಿನ ತಲಕಾಡು ಹೋಬಳಿಯ ಅಕ್ಕೂರು ಗ್ರಾಮದಲ್ಲಿ ಅಕ್ರಮ ಮಣ್ಣು ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಈ ಬಗ್ಗೆ ಕಂದಾಯ ಇಲಾಖೆಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ಕೂರು ಗ್ರಾಮದ ಸ್ಥಳೀಯ ಜಮೀನುಗಳಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡುವ ಜಾಲ ಸಕ್ರಿಯವಾಗಿದ್ದು ಜೆಸಿಬಿ ಮತ್ತು ಟಿಪ್ಪರ್ ಲಾರಿಗಳ ಮೂಲಕ ಹಗಲು ರಾತ್ರಿ ಎನ್ನದೆ ಮಣ್ಣನ್ನು ಅಕ್ರಮವಾಗಿ ಸಾಗಿಸಿ ಹಣಕ್ಕಾಗಿ ಮಾರಾಟ ಮಾಡಲಾಗುತ್ತಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿಯನ್ನು ಪಡೆಯದೆ ಕೃಷಿ ಭೂಮಿಯ ಮಣ್ಣನ್ನು ಸಾಗಿಸುತ್ತಿರುವುದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಈಗಾಗಲೇ ಅಕ್ರಮದ ಬಗ್ಗೆ ಗ್ರಾಮಸ್ಥರು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಆದರೆ, ಯಾವುದೇ ಕ್ರಮ ಕೈಗೊಳ್ಳುವ ಬದಲು ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ. ಅಕ್ರಮ ಸಾಗಾಣೆ ಮಾಡುತ್ತಿರುವವರ ಜೊತೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಸ್ಥಳದಲ್ಲಿ ಅಕ್ರಮ ನಡೆಯುತ್ತಿದ್ದರೂ, ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇದು ಅಕ್ರಮದಲ್ಲಿ ತೊಡಗಿರುವವರಿಗೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಕೂಡಲೇ ಸಂಬಂಧಪಟ್ಟ ಇಲಾಖೆಗಳು ಈ ಬಗ್ಗೆ ಗಮನಹರಿಸಿ ಅಕ್ರಮ ಮಣ್ಣು ಸಾಗಾಣಿಕೆಯನ್ನು ತಡೆಗಟ್ಟಬೇಕು ಮತ್ತು ಕರ್ತವ್ಯ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Kshetra Samachara
26/08/2025 03:55 pm