", "articleSection": "Infrastructure", "image": { "@type": "ImageObject", "url": "https://prod.cdn.publicnext.com/s3fs-public/474798-1756478124-ratse.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Veeresh naik ballari" }, "editor": { "@type": "Person", "name": "Vinay.Hegde" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬಳ್ಳಾರಿ: ಬಳ್ಳಾರಿ ನಗರ್ ಗಡಿಗಿ ಚನ್ನಪ್ಪ ವೃತ್ತದಿಂದ ಈಡಿಗ ಹಾಸ್ಟೇಲ್‌ವರೆಗಿನ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ಶುಕ್ರವಾರ ಆರಂಭಗ...Read more" } ", "keywords": "Ballari road widening, Ballari market construction, Ballari development works, infrastructure projects Ballari, road expansion Ballari, new market Ballari, Ballari city news, Ballari road work 2025, Karnataka urban development, Ballari smart city projects, Ballari public works", "url": "https://dashboard.publicnext.com/node" }
ಬಳ್ಳಾರಿ: ಬಳ್ಳಾರಿ ನಗರ್ ಗಡಿಗಿ ಚನ್ನಪ್ಪ ವೃತ್ತದಿಂದ ಈಡಿಗ ಹಾಸ್ಟೇಲ್‌ವರೆಗಿನ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ಶುಕ್ರವಾರ ಆರಂಭಗೊಂಡಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ಮಾಹಿತಿ ಪಡೆದು, ಅಗತ್ಯ ಸೂಚನೆ ನೀಡಿದರು.
ಗಾಂಧಿ ಭವನದ ಎದುರಿಗೆ ಉದ್ಧೇಶಿತ ಹೂ-ಹಣ್ಣು ಬೀದಿ ಬದಿ ವ್ಯಾಪಾರಿಗಳ ಮಾರುಕಟ್ಟೆ ನಿರ್ಮಾಣ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದ ಶಾಸಕ ನಾರಾ ಭರತ್ ರೆಡ್ಡಿ ಕಾಮಗಾರಿ ವಿಳಂಬ ಆಗದಂತೆ ಕೆಲಸ ಮಾಡಬೇಕೆಂದು ಸೂಚಿಸಿದರು. ಲೋಕೋಪಯೋಗಿ ಇಲಾಖೆಯ ಇಇ ಹೇಮರಾಜ್, ಎಇಇ ಬಸರೆಡ್ಡಿ, ಮಹಾನಗರ ಪಾಲಿಕೆಯ ನೂತನ ಆಯುಕ್ತ ಮಂಜುನಾಥ್ ಹಾಜರಿದ್ದರು.
ವೀರೇಶ್ ನಾಯಕ ಎಲ್, ಬಳ್ಳಾರಿ
PublicNext
29/08/2025 08:05 pm