", "articleSection": "Law and Order,Government", "image": { "@type": "ImageObject", "url": "https://prod.cdn.publicnext.com/s3fs-public/474799-1756561948-1208-.02_00_42_19.Still058.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Purashottama Surapur" }, "editor": { "@type": "Person", "name": "Pavan.Badiger" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ನಿಲಯದಲ್ಲಿ 9ನೇ ತರಗತಿ ಬಾಲಕಿ, ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಗುರುಗ...Read more" } ", "keywords": "Yadgiri Shahapur hostel incident, Yadgiri student hostel issue, Shahapur hostel protest, hostel incident action demand, Karnataka student news, Yadgiri hostel controversy ", "url": "https://dashboard.publicnext.com/node" }
ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ನಿಲಯದಲ್ಲಿ 9ನೇ ತರಗತಿ ಬಾಲಕಿ, ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಗುರುಗಳು ಮತ್ತು ವಸತಿ ನಿಲಯದ ಮೇಲ್ವಿಚಾರಕರ ಹಾಗೂ ಪ್ರಕರಣದಲ್ಲಿ ಆರೋಪಿತನಾಗಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಭೀಮನಗೌಡ ವಿ. ಲಕ್ಷ್ಮಿ ಆಗ್ರಹಿಸಿದರು.
ಸುರಪುರ ಉಪ ವಿಭಾಗದ ಡಿವೈಎಸ್ಪಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಪರಿಶಿಷ್ಟ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕೃತ್ಯ ಎಸಗಿರುವ ವ್ಯಕ್ತಿಯ ವಿರುದ್ಧ ಪೋಕ್ಸೋ ಮತ್ತು ಅಟ್ರಾಸಿಟಿ ಪ್ರಕರಣಗಳನ್ನು ದಾಖಲಿಸಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿದರು.
ನಾಗರಾಜ ನಾಯಕ ಪ್ಯಾಪ್ಲಿ ಮಾತನಾಡಿ ಬಾಲಕಿಗೆ ಶೌಚಾಲಯದಲ್ಲಿ ಹೆರಿಗೆಯಾದರು ಸಹ ವಸತಿ ನಿಲಯದ ಮೇಲ್ವಿಚಾರಕರು ಮತ್ತು ಶಾಲಾ ಮುಖ್ಯ ಗುರುಗಳ ಗಮನಕ್ಕೆ ಬಂದಿಲ್ಲವೆಂದರೆ ಅವರ ನಿರ್ಲಕ್ಷವೇ ಕಾರಣ ಕೊಡಲೇ ಶಾಲೆಯ ಮುಖ್ಯ ಶಿಕ್ಷಕರು ಮತ್ತು ವಸತಿ ನಿಲಯದ ಮೇಲ್ವಿಚಾರಕರ ಮೇಲೆಯೂ ಸೂಕ್ತ ಕ್ರಮ ಜರುಗಿಸಬೇಕು. ಈ ಪ್ರಕರಣದಿಂದ ಮನುಕುಲವೇ ತಲೆತಗ್ಗಿಸುವಂಥಾಗಿದ್ದು. ಸರಕಾರ ಸೂಕ್ತ ತನಿಖೆ ನಡೆಸಬೇಕು ಮತ್ತು ಆರೋಪಿತನಿಗೆ ನೀಡುವ ಶಿಕ್ಷೆ ಇತರರಿಗೆ ಪಾಠವಾಗಬೇಕು ಎಂದರು.
ಭೀಮು ನಾಯಕ, ವೆಂಕಟೇಶ ನಾಯಕ ಬೈರಿಮಡ್ಡಿ, ಮೌನೇಶ್ ನಾಯಕ ದೇವರಗೋನಾಲ, ಸಂಜೀವ ನಾಯಕ, ಗಂಗಾಧರ್ ನಾಯಕ ಅರಳಳ್ಳಿ, ತಿಮ್ಮಣ್ಣ ನಾಯಕ, ಮೌನೇಶ ಧಳಪತಿ ಸೇರಿ ಅನೇಕರು ಉಪಸ್ಥಿತರಿದ್ದರು.
Kshetra Samachara
30/08/2025 07:22 pm