ಶಿರಸಿ: ಶಿರಸಿ ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ, ಉತ್ತರ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉತ್ತರ ಕನ್ನಡ ತಾಲೂಕಾ ಪಂಚಾಯತ, ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ತಾಲೂಕಾ ಮಟ್ಟದ 2025-26ರ ದಸರಾ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ.
ಈ ಕ್ರೀಡಾಕೂಟದ ಉದ್ಘಾಟಕರಾಗಿ ಶಾಸಕ ಭೀಮಣ್ಣ ನಾಯ್ಕ ಆಗಮಿಸಲಿದ್ದಾರೆ. ಮತ್ತು ಮುಖ್ಯ ಅತಿಥಿಗಳಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಎಸ್. ವಿ. ಸಂಕನೂರು, ಶಾಸಕ ಶಿವರಾಮ ಹೆಬ್ಬಾರ, ಶಾಂತಾರಾಮ ಸಿದ್ದಿ, ಗಣಪತಿ ಡಿ. ಉಶ್ವೇಕರ,ನಗರ ಸಭೆ ಅಧ್ಯಕ್ಷೆ ಶರ್ಮಿಳಾ ಚಂದ್ರಶೇಖರ ಮಾದನಗೇರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಎನ್. ಗೌಡ, ಎಸಿ ಕಾವ್ಯಾರಾಣಿ, ಡಿವೈಎಸ್ಪಿ ಗೀತಾ ಪಾಟೀಲ್, ತಹಶೀಲ್ದಾರ ಪುಟ್ಟರಾಜ ಗೌಡ, ತಾಪಂ ಇಒ ಚನ್ನಬಸಪ್ಪ ಹಾವಣಗಿ, ಇನ್ನೂ ಅನೇಕ ಇಲಾಖಾ ಅಧಿಕಾರಿಗಳು ಆಗಮಿಸಲಿದ್ದಾರೆ ಎಂದು ಕಿರಣಕುಮಾರ ಎಚ್. ನಾಯ್ಕ ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿಗಳು, ತಾಲೂಕಾ ಪಂಚಾಯತ, ಶಿರಸಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ
Kshetra Samachara
31/08/2025 07:16 am