", "articleSection": "Politics,Crime,Law and Order,Religion", "image": { "@type": "ImageObject", "url": "https://prod.cdn.publicnext.com/s3fs-public/229640-1756629168-hsn.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ: ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಸಂಚು ನಡೆಯುತ್ತಿದೆ. ಇದಕ್ಕೆ ಸಮಾಜಘಾತುಕ ಶಕ್ತಿಗಳು ಕೈ ಹಾಕಿವೆ. ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹ...Read more" } ", "keywords": "Hassan Dharmasthala case, Nikhil Kumaraswamy demands NIA probe, Dharmasthala case investigation Hassan, NIA investigation demand Dharmasthala, Hassan politics news, JD(S) leader Nikhil Kumaraswamy statement, Dharmasthala case Karnataka, Hassan latest news, NIA probe request Hassan, Karnataka political updates", "url": "https://dashboard.publicnext.com/node" } ಹಾಸನ: ಧರ್ಮಸ್ಥಳ ಕೇಸ್‌ - ಎನ್‌ಐಎ ತನಿಖೆಗೆ ನಿಖಿಲ್ ಕುಮಾರಸ್ವಾಮಿ ಒತ್ತಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಧರ್ಮಸ್ಥಳ ಕೇಸ್‌ - ಎನ್‌ಐಎ ತನಿಖೆಗೆ ನಿಖಿಲ್ ಕುಮಾರಸ್ವಾಮಿ ಒತ್ತಾಯ

ಹಾಸನ: ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಸಂಚು ನಡೆಯುತ್ತಿದೆ. ಇದಕ್ಕೆ ಸಮಾಜಘಾತುಕ ಶಕ್ತಿಗಳು ಕೈ ಹಾಕಿವೆ. ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಹಾಸನದಿಂದ ಧರ್ಮಸ್ಥಳಕ್ಕೆ ಸತ್ಯ ಯಾತ್ರೆ ಆರಂಭಿಸಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ಧರ್ಮಸ್ಥಳದ ಆವರಣದಲ್ಲಿ ಅಪಪ್ರಚಾರಗಳು, ಅನುಮಾನ ಎಬ್ಬಿಸುವಂತಹ ಸಂಘಟಿತ ಷಡ್ಯಂತ್ರಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಮಂಜುನಾಥಸ್ವಾಮಿ ವಿಚಾರದಲ್ಲಿ ರಾಜಕೀಯ ಬೆರೆಸುವ ಪ್ರಶ್ನೆಯೇ ಇಲ್ಲ. ಇದು ಪಕ್ಷಾತೀತ ಯಾತ್ರೆ. ಭಕ್ತಾಧಿಗಳು ಸ್ವಇಚ್ಛೆಯಿಂದ ಪಾಲ್ಗೊಂಡಿದ್ದಾರೆ. ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಹುನ್ನಾರವನ್ನು ಖಂಡಿಸಿದ ಅವರು, ಇದರಲ್ಲಿ ಯೂಟ್ಯೂಬರ್‌ಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಇದರ ಹಿಂದೆ ದೊಡ್ಡ ಮಟ್ಟದ ಸಂಘಟನೆ ಹಾಗೂ ಅಂತಾರಾಷ್ಟ್ರೀಯ ಹಣಕಾಸು ಇದೆ. ಆದ್ದರಿಂದ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

Edited By : Manjunath H D
PublicNext

PublicNext

31/08/2025 02:03 pm

Cinque Terre

16.98 K

Cinque Terre

1

ಸಂಬಂಧಿತ ಸುದ್ದಿ