ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾನಗಲ್: ಓಸ್ಯಾಟ್ ಸಂಸ್ಥೆಯ ಸಹಯೋಗದಲ್ಲಿ ನಿರ್ಮಾಣಗೊಂಡ ಸರ್ಕಾರಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ

ಹಾನಗಲ್: ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಅಮೆರಿಕದ ಓಸ್ಯಾಟ್ (ಒನ್‌ ಸ್ಕೂಲ್‌ ಅಟ್‌ ಎ ಟೈಮ್‌) ಸಂಸ್ಥೆ 75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಓಸ್ಯಾಟ್ ಸಂಸ್ಥೆಯು ಶಾಲೆಗಳ ಅಭಿವೃದ್ಧಿಗಾಗಿ ವಿದೇಶದಲ್ಲಿ ನೆಲೆಸಿರುವ ಭಾರತೀಯರ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಓಸ್ಯಾಟ್ ಸಂಸ್ಥೆಯ ಸಹಯೋಗದಲ್ಲಿ 50%-50% ಅನುಪಾತದಲ್ಲಿ ಒಟ್ಟು 7.3೦ ಕೋಟಿ ರೂ. ವೆಚ್ಚದಲ್ಲಿ ತಾಲೂಕಿನ 1೦ ಸರ್ಕಾರಿ ಶಾಲೆಗಳಿಗೆ ಅತ್ಯಾಧುನಿಕ ಮಾದರಿಯ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. 1೦ ಶಾಲೆಗಳ ಕಟ್ಟಡಗಳ ನಿರ್ಮಾಣಕ್ಕೆ ತಗಲುವ ವೆಚ್ಚದಲ್ಲಿ 3.65 ಕೋಟಿ ರೂ. ವೆಚ್ಚವನ್ನು ಓಸ್ಯಾಟ್ ಸಂಸ್ಥೆ ಭರಿಸಲಿದ್ದು, ಇನ್ನುಳಿದ 3.65 ಕೋಟಿ ರೂ. ವೈಯಕ್ತಿಕ ಹಾಗೂ ದಾನಿಗಳ ನೆರವಿನಿಂದ ಭರಿಸಲು ಉದ್ದೇಶಿಸಲಾಗಿದೆ.

ಓಸ್ಯಾಟ್ ಸಂಸ್ಥೆಯ ಪ್ರತಿನಿಧಿ ಮಂಜುನಾಥ ಕೆ.ಆರ್. ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಮೂಲ ಉದ್ದೇಶದೊಂದಿಗೆ ಗ್ರಾಮೀಣ ಪರಿಸರದ ಸರಕಾರಿ ಶಾಲೆಗಳನ್ನು ಸರಕಾರದ ಅನುದಾನ ಪಡೆಯದೆ ಅಭಿವೃದ್ಧಿಗೊಳಿಸುವ ಉದ್ದೇಶದಿಂದ ಓಸ್ಯಾಟ್ ಸಂಸ್ಥೆ 2೦೦3 ರಲ್ಲಿ ಜನ್ಮ ತಳೆದಿದ್ದು ಇದುವರೆಗೆ 123 ಶಾಲೆಗಳಿಗೆ ಸುಸಜ್ಜಿತ ಕಟ್ಟಡ ನಿರ್ಮಿಸಿದೆ.

ಹಿಂದೆ ಮೈಸೂರು ಭಾಗದಲ್ಲಿ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದು, ಈ ಬಾರಿ ಹಾವೇರಿ ಜಿಲ್ಲೆಯನ್ನು ಕ್ಲಸ್ಟರ್ ಮಾಡಿಕೊಳ್ಳಲಾಗಿದೆ. ದಾನಿಗಳು ನೀಡಿದ ಪ್ರತಿ ಪೈಸೆಯನ್ನೂ ಸಹ ಸದ್ಬಳಕೆ ಮಾಡಿಕೊಂಡು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಗುಣಮಟ್ಟದ ಕಟ್ಟಡ ನಿರ್ಮಿಸಲಾಗುತ್ತಿದೆ. ಪ್ರತಿ 6 ತಿಂಗಳಿಗೊಮ್ಮೆ ಶಾಲೆಗಳಿಗೆ ಭೇಟಿ ನೀಡಿ, ನಿರ್ವಹಣೆ ತೃಪ್ತಿಕರವಾಗಿದ್ದರೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಸಂಸ್ಥೆ ಗಮನ ನೀಡಲಿದೆ ಎಂದರು.

Edited By :
PublicNext

PublicNext

01/09/2025 02:34 pm

Cinque Terre

15.22 K

Cinque Terre

0

ಸಂಬಂಧಿತ ಸುದ್ದಿ